Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:6 - ಕನ್ನಡ ಸತ್ಯವೇದವು C.L. Bible (BSI)

6 ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಂದು ದಿನವು ಬರುವುದು, ಆಗ ಎಫ್ರಾಯೀಮಿನ ಗುಡ್ಡಗಳ ಮೇಲಿರುವ ಕಾವಲುಗಾರರು, ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ’ ಎಂದು ಕೂಗುವರು” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಂದು ದಿನವು ಬರುವದು, ಆಗ ಎಫ್ರಾಯೀವಿುನ ಗುಡ್ಡಗಳ ಮೇಲಿರುವ ಕಾವಲುಗಾರರು - ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಯೆಹೋವನ ಸನ್ನಿಧಾನಕ್ಕೆ ಹೋಗೋಣ ಬನ್ನಿ ಎಂದು ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಂದು ಕಾಲ ಬರುವುದು, ಆಗ ಕಾವಲುಗಾರರು, ‘ಬನ್ನಿ, ನಮ್ಮ ದೇವರಾದ ಯೆಹೋವನನ್ನು ಆರಾಧಿಸಲು ಚೀಯೋನಿಗೆ ಹೋಗೋಣ’ ಎಂದು ಕೂಗುವರು. ಎಫ್ರಾಯೀಮಿನ ಬೆಟ್ಟಪ್ರದೇಶದ ಕಾವಲುಗಾರರು ಸಹ ಹೀಗೆಯೇ ಕೂಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಒಂದು ದಿನ ಬರುವದು, ಆಗ ಎಫ್ರಾಯೀಮನ ಪರ್ವತಗಳ ಮೇಲಿರುವ ಕಾವಲುಗಾರರು, ‘ಏಳಿರಿ, ಚೀಯೋನಿಗೆ, ನಮ್ಮ ಯೆಹೋವ ದೇವರ ಬಳಿಗೆ ಹೋಗೋಣ,’ ” ಎಂದು ಕೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:6
23 ತಿಳಿವುಗಳ ಹೋಲಿಕೆ  

ಇಸ್ರಯೇಲೆಂಬ ಮಂದೆಯನ್ನು ಮರಳಿ ಅದರ ಹುಲ್ಲುಗಾವಲಿಗೆ ಸೇರಿಸುವೆನು. ಅದು ಕರ್ಮೆಲಿನಲ್ಲೂ ಭಾಷಾನಿನಲ್ಲೂ ಮೇಯುವುದು. ಎಫ್ರಯಿಮಿನ ಮತ್ತು ಗಿಲ್ಯಾದಿನ ಗುಡ್ಡಗಳಲ್ಲಿ ಹೊಟ್ಟೆತುಂಬ ತಿನ್ನುವುದು.


ಎಫ್ರಯಿಮನ ದೇವಜನರಿಗೆ ಪ್ರವಾದಿಯೇ ಕಾವಲುಗಾರ. ಆದರೂ ಅವನ ಹಾದಿಯಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ. ದೇವರ ಆಲಯದಲ್ಲೂ ಅವನಿಗೆ ಹಗೆತನ ಕಾದಿದೆ.


ಯೆಹೂದ್ಯಜನರೂ ಇಸ್ರಯೇಲಿನ ಜನರೂ ಪುನಃ ಒಂದುಗೂಡುವರು. ಒಬ್ಬನೇ ಅಧಿಪತಿಯನ್ನು ಆರಿಸಿಕೊಳ್ಳುವರು. ಅವರೆಲ್ಲರೂ ನಾನಾ ದೇಶಗಳಿಂದ ಹೊರಟುಬರುವರು. ಜೆಸ್ರೀಲಿನ ಆ ದಿನವು ಮಹತ್ತಾದುದು.


“ನರಪುತ್ರನೇ, ಜನರನ್ನು ಸಂಭೋದಿಸಿ ಅವರಿಗೆ ಹೀಗೆ ನುಡಿ - “ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಆರಿಸಿ ನೇಮಿಸಿಕೊಂಡ ಕಾವಲುಗಾರನು


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಸರ್ವೇಶ್ವರ ಸ್ವಾಮಿ ಕಾವಲುಗಾರರನ್ನು ನೇಮಿಸಿ, “ಕಹಳೆಯ ಕೂಗನ್ನು ಕೇಳಿ” ಎಂದರು. ಅವರು “ಇಲ್ಲ, ಕೇಳುವುದಿಲ್ಲ” ಎಂದು ಉತ್ತರಿಸಿದರು.


ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ಆಗ ಅಬೀಯನು ಎಫ್ರಯಿಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮೆಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಯೇಲರೇ, ನನ್ನ ಮಾತಿಗೆ ಕಿವಿಗೊಡಿ;


ಈ ಪ್ರಕಟನೆಯನ್ನು ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು.


ನಿನ್ನಿಂದ ಶಕ್ತಿಪಡೆಯುವವರು ಧನ್ಯರು I ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು II


“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು