ಯೆರೆಮೀಯ 31:9 - ಕನ್ನಡ ಸತ್ಯವೇದವು C.L. Bible (BSI)9 ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ. ಅಧ್ಯಾಯವನ್ನು ನೋಡಿ |