Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:10 - ಕನ್ನಡ ಸತ್ಯವೇದವು C.L. Bible (BSI)

10 ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪತ್ರಕ್ಕೆ ಸಹಿ ಹಾಕಿ ಮುಚ್ಚಿ ಆ ಮುಚ್ಚಳಕ್ಕೆ ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪತ್ರಕ್ಕೆ ರುಜು ಹಾಕಿ ಮುಚ್ಚಿ [ಮುಚ್ಚಳಕ್ಕೆ] ಸಾಕ್ಷಿಗಳನ್ನು ಹಾಕಿಸಿ ತ್ರಾಸಿನಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಕ್ರಯಪತ್ರಕ್ಕೆ ಸಹಿ ಹಾಕಿದೆನು. ಕ್ರಯಪತ್ರದ ಒಂದು ಪ್ರತಿಗೆ ರುಜು ಮಾಡಿಸಿದೆನು. ಇದಕ್ಕೆ ಸಾಕ್ಷಿಯಾಗಿ ಕೆಲಜನರನ್ನು ಕರೆಸಿದೆನು. ನಾನು ಬೆಳ್ಳಿಯನ್ನು ತಕ್ಕಡಿಯಲ್ಲಿ ತೂಕಹಾಕಿ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆಹಾಕಿ, ಸಾಕ್ಷಿಗಳನ್ನಿಟ್ಟು, ಬೆಳ್ಳಿಯನ್ನು ತ್ರಾಸಿನಲ್ಲಿ ತೂಕಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:10
23 ತಿಳಿವುಗಳ ಹೋಲಿಕೆ  

ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಣ ಪ್ರದೇಶ, ಜುದೇಯದ ಊರುಗಳು, ಮಲೆನಾಡಿನ, ಕೆಳನಾಡಿನ, ದಕ್ಷಿಣ ಪ್ರಾಂತ್ಯದ ಊರುಗಳು ಈ ಎಲ್ಲ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿ ಹಾಕಿಸಿ ಕೊಂಡುಕೊಳ್ಳುವರು. ನಾನು ನನ್ನ ಜನರನ್ನು ಗುಲಾಮಗಿರಿಯಿಂದ ಬಿಡಿಸಿ ಬರಮಾಡುವೆನು.


ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆ. ನನ್ನ ಚಿಕ್ಕಪ್ಪನ ಮಗ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲ ಯೆಹೂದ್ಯರ ಎದುರಿನಲ್ಲಿ, ಆ ಕ್ರಯಪತ್ರವನ್ನು ಕೊಟ್ಟೆ.


ದೇವರಾದ ಸರ್ವೇಶ್ವರಾ, ಸಾಕ್ಷಿಗಳನ್ನು ಕರೆಯಿಸಿ, ಕ್ರಯಕೊಟ್ಟು ಹೊಲವನ್ನು ಕೊಂಡುಕೊ ಎಂದು ನೀವು ನನಗೆ ಆಜ್ಞಾಪಿಸಿದಿರಿ. ಆದರೆ ನೋಡಿ, ನಗರವು ಬಾಬಿಲೋನಿಯರ ಕೈವಶವಾಗಲಿದೆ.”


ಹೇಳಿಕೊಳ್ಳುವನೊಬ್ಬನು ತಾನು ಸರ್ವೇಶ್ವರನ ಶರಣನೆಂದು ಹೆಸರಿಸಿಕೊಳ್ಳುವನು ಇನ್ನೊಬ್ಬನು ತಾನು ಯಕೋಬ್ಯನೆಂದು ಕೈಯಲ್ಲಿ ಹಚ್ಚೆ ಹೊಯ್ದುಕೊಳ್ಳುವನು ಮತ್ತೊಬ್ಬನು ಸರ್ವೇಶ್ವರನ ದಾಸನೆಂದು ಬಿರುದನ್ನು ಧರಿಸಿಕೊಳ್ಳುವನವನು ತಾನು ಇಸ್ರಯೇಲ್ಯನೆಂದು.”


ಆಗ ನನ್ನ ದ್ರೋಹವನ್ನೆಲ್ಲ ಮೂಟೆಕಟ್ಟಿ ಮೂಲೆಗೆ ಹಾಕುವೆ ನನ್ನ ದೋಷವನ್ನು ಮುಚ್ಚಿ, ನೀ ಮರೆಮಾಡುವೆ.


“ಇಸ್ರಯೇಲನನು ಇಟ್ಟಿದ್ದೇನೆ ಮುದ್ರೆಹಾಕಿ ಉಗ್ರಾಣದೊಳು ಇಟ್ಟಿದ್ದೇನೆ ಭದ್ರವಾಗಿ.


ಭೂಮಿಯ ಮೇಲಣ ಹುಲ್ಲಿಗಾಗಲಿ, ಯಾವುದೇ ಹಸಿರು ಇಲ್ಲವೇ ಮರಗಳಿಗಾಗಲಿ ಕೇಡನ್ನುಂಟುಮಾಡಬಾರದು ಎಂದೂ ಮಾನವರಲ್ಲಿ ಯಾರ ಹಣೆಯ ಮೇಲೆ ದೇವರ ಮುದ್ರೆಯಿಲ್ಲವೋ ಅಂಥವರಿಗೆ ಮಾತ್ರ ಕೇಡು ಮಾಡಬಹುದೆಂದೂ ಅಪ್ಪಣೆಯಾಗಿತ್ತು.


ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ:


ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.


ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.


ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ.


ಕನಸಿನಲ್ಲಿ ತಿಳಿಸಲಾದ ಉದಯಾಸ್ತಮಾನಗಳ ವಿಷಯ ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹುದೂರದ ಕಾಲದ್ದು,” ಎಂದು ಹೇಳಿದನು.


ಸರ್ವೇಶ್ವರ ನನಗೆ ಇಂತೆಂದರು : “ನೀನು ಈಗಲೇ ಹೋಗಿ, ನಾನು ಹೇಳುವುದನ್ನು ಅವರೆದುರಿನಲ್ಲಿಯೆ ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ. ಅದು ಮುಂದಿನ ಕಾಲಕ್ಕೆ - ಶಾಶ್ವತ ಸಾಕ್ಷಿಯಾಗಿರಲಿ.


ನಿನ್ನ ವೃಕ್ಷದಲಿ, ನಿನ್ನ ಹಸ್ತಗಳಲಿ ಧರಿಸಿಕೊ ನನ್ನನ್ನು ಪ್ರೇಮ ಮುದ್ರೆಯಾಗಿ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ ! ಮತ್ಸರ ಪಾತಾಳದಷ್ಟು ಕ್ರೂರಿ ಅದರ ಜ್ವಾಲೆ ಬೆಂಕಿಯ ಉರಿ ಧಗಧಗಿಸುವ ಕೋಪಾಗ್ನಿ.


ಆ ಜನರು ಹೊರಟು ನಾಡಿನಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಗ್ರಾಮ-ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂದಿರುಗಿ ಬಂದರು.


ಅವರು ಹೋಗಿ, ಸಮಾಧಿಯ ಕಲ್ಲಿಗೆ ಮುದ್ರೆಹಾಕಿ, ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿ, ಅವನು ಆ ಹಿತ್ತಿಯರ ಮುಂದೆ ಸೂಚಿಸಿದ ನಾನೂರು ಬೆಳ್ಳಿ ನಾಣ್ಯಗಳನ್ನು, ವ್ಯಾಪಾರಿಗಳಲ್ಲಿ ಪ್ರಚಲಿತವಾಗಿದ್ದ ಬೆಳ್ಳಿಯಿಂದ ತೂಕಮಾಡಿ ಕೊಟ್ಟನು.


ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ಅಬ್ರಹಾಮನಿಗೆ ಸ್ವಂತ ಸ್ಮಶಾನಭೂಮಿಯಾಗಲೆಂದು ಸ್ವಾಧೀನಗೊಳಿಸಿದವರು ಆ ಹಿತ್ತಿಯರೇ.


ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು