Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:19 - ಕನ್ನಡ ಸತ್ಯವೇದವು C.L. Bible (BSI)

19 ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀನು ಮಹತ್ತರವಾದ ಯೋಜನೆಗಳನ್ನು ಹಾಕಿ ಮಹತ್ಕಾರ್ಯಗಳನ್ನು ಮಾಡುವೆ. ಜನರು ಮಾಡುವ ಎಲ್ಲವನ್ನೂ ನೀನು ನೋಡುವೆ. ಒಳ್ಳೆಯದನ್ನು ಮಾಡುವವರಿಗೆ ನೀನು ಪ್ರತಿಫಲಗಳನ್ನು ಕೊಡುವೆ. ಕೆಟ್ಟದ್ದನ್ನು ಮಾಡುವವರನ್ನು ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೊ ಅದನ್ನು ಕೊಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ನಿಮ್ಮ ಯೋಜನೆಯಲ್ಲಿ ದೊಡ್ಡವರು, ಕ್ರಿಯೆಯಲ್ಲಿ ಬಲಿಷ್ಠರು. ನಿಮ್ಮ ಕಣ್ಣುಗಳು ಮನುಷ್ಯರ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರವಾಗಿಯೂ ಕೊಡುವ ಹಾಗೆ ತೆರೆದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:19
35 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.


ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II


“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಅವನ ಹೆಜ್ಜೆಗಳೆಲ್ಲ ಗೋಚರವಾಗಿವೆ ಆತನಿಗೆ.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ಆದೇಶವಿತ್ತವನಾರು ಸರ್ವೇಶ್ವರನ ಆತ್ಮಕೆ? ಉಪದೇಶವಿತ್ತ ಸಲಹೆಗಾರನಾರು ಆತನಿಗೆ?


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ದೇವರು ನರನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನೀಯುತ್ತಾನೆ ಪ್ರತಿಯೊಬ್ಬನು ಅವನವನ ಕರ್ಮಕ್ಕೆ ತಕ್ಕಂತೆ ಅನುಭವಿಸಮಾಡುತ್ತಾನೆ.


ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.


ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.”


ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.


ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II


ಮಹತ್ತಾದವು ಪ್ರಭುವಿನಾ ಕಾರ್ಯಗಳು I ಕೊಂಡಾಡುವರು ಅವುಗಳನು ಭಕ್ತಾದಿಗಳು II


ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು.


ಅನೇಕ ರಾಷ್ಟ್ರಗಳೂ ಮಹಾರಾಜರೂ ಅವರನ್ನು ಗುಲಾಮರನ್ನಾಗಿಸಿಕೊಳ್ಳುವರು. ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿ ತೀರಿಸುವೆನು.”


ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು