Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:20 - ಕನ್ನಡ ಸತ್ಯವೇದವು C.L. Bible (BSI)

20 ಈಜಿಪ್ಟ್ ದೇಶದಲ್ಲಿ ಮಾಡಿದ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಇಸ್ರಯೇಲರಲ್ಲೂ ಇತರ ಜನಾಂಗಗಳಲ್ಲೂ ಈ ದಿನದವರೆಗೂ ಮಾಡಿ ಹೆಸರುವಾಸಿಯಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ನಡಿಸಿ ಈ ದಿನದವರೆಗೆ ಇಸ್ರಾಯೇಲ್ಯರಲ್ಲಿಯೂ ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿ; ಅದು ಈಗಲೂ ಸ್ಥಿರವಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನ್ನು ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನ್ನು ಮಾಡಿದೆ. ಜನರು ಇರುವಲ್ಲೆಲ್ಲ ನೀನು ಅವುಗಳನ್ನು ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ಈ ದಿನದವರೆಗೂ ಈಜಿಪ್ಟ್ ದೇಶದಲ್ಲಿಯೂ ಇಸ್ರಾಯೇಲಿನಲ್ಲಿಯೂ ಜನಾಂಗಗಳೊಳಗೂ ಗುರುತುಗಳನ್ನೂ, ಲಕ್ಷಣಗಳನ್ನೂ ಇಟ್ಟಿದ್ದೀರಿ. ಇಂದಿನವರೆಗೂ ನಿಮಗೆ ಹೆಸರನ್ನು ಸ್ಥಿರಪಡಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:20
21 ತಿಳಿವುಗಳ ಹೋಲಿಕೆ  

ಈಜಿಪ್ಟಿನವರು ಅವರನು ದರ್ಪದಿಂದ ದಮನಮಾಡುವಲ್ಲಿ ಎಸಗಿದಿರಿ ಅದ್ಭುತಕಾರ್ಯಗಳನು ಸೂಚಕಕಾರ್ಯಗಳನು ಫರೋಹನಲಿ, ಅವನ ಸೇವಕರಲಿ, ಆ ನಾಡಿನ ಜನರಲಿ. ಉಳಿಸಿಕೊಂಡಿರಿ ಇಂದಿಗೂ ಅಂದು ಸಾಧಿಸಿದ ಕೀರ್ತಿಯನು.


ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.


“ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ಓ ಈಜಿಪ್ಟೆ, ನಿನ್ನೊಳು ಮಾಡಿದನು ಅದ್ಭುತ ಪವಾಡಗಳನು I ಫರೋಹನ ಮೇಣ್ ಅವನ ಸೇವಕರ ವಿರುದ್ಧ ಗೈದನವುಗಳನು II


ತಮ್ಮ ಇಸ್ರಯೇಲ್ ಪ್ರಜೆಗೆ ಸಮಾನಾದ ಜನಾಂಗ ಲೋಕದಲ್ಲಿ ಯಾವುದಿದೆ? ತಾವೇ ಬಂದು ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿಸಿಕೊಂಡು, ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರು ಹಾಗು ಇತರ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವುಗಳ ಕಣ್ಮುಂದೆಯೇ ನಿಮ್ಮ ನಾಡಿನವರ ಪರವಾಗಿ ವಿಸ್ಮಯಕರವಾದ ಮಹತ್ಕಾರ್ಯಗಳನ್ನು ನಡೆಸಿದಿರಿ.


ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?


ತಮ್ಮ ಇಸ್ರಯೇಲ್ ಪ್ರಜೆಗೆ ಸಮನಾದ ಜನಾಂಗ ಲೋಕದಲ್ಲಿ ಬೇರೆ ಯಾವುದಿದೆ? ದೇವರಾದ ತಾವೇ ಬಂದು ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿಸಿಕೊಂಡಿರಿ; ಆಶ್ಚರ್ಯಕರವಾದ ಅದ್ಭುತಕಾರ್ಯಗಳಿಂದ ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರ ಕೈಯಿಂದ ತಮ್ಮ ಪ್ರಜೆಯನ್ನು ತಪ್ಪಿಸಿ, ರಕ್ಷಿಸಿದಿರಿ. ಅನ್ಯಜನಾಂಗಗಳನ್ನು ಅವರ ನಾಡಿನಿಂದ ಹೊರಡಿಸಿಬಿಟ್ಟಿರಿ.


ಆಗ ನೀವೇ ಕಣ್ಣಾರೆ ನೋಡಿದಂತೆ ಸರ್ವೇಶ್ವರ ವಿಶೇಷ ಪರಿಶೋಧನೆ, ಪವಾಡ, ಮಹತ್ಕಾರ್ಯ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದರಲ್ಲವೆ? ನೀವು ಹೆದರಿಕೊಳ್ಳುವ ಆ ಎಲ್ಲ ಜನಾಂಗಗಳಿಗೂ ಅವರು ಹಾಗೆಯೇ ಮಾಡುವರು.


ಭಯಂಕರ ಆದ ಮಹತ್ಕಾರ್ಯಗಳಿಂದ ಮತ್ತು ಸೂಚಕಕಾರ್ಯಗಳಿಂದ ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಮನೆಯವರನ್ನೂ ನಮ್ಮ ಕಣ್ಣೆದುರಿನಲ್ಲೇ ಶಿಕ್ಷಿಸಿದರು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಆದರೂ ನಾನು ಫರೋಹನ ಹೃದಯವನ್ನು ಕಲ್ಲಾಗಿಸಿ ಈಜಿಪ್ಟ್ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ ನನ್ನ ಶಕ್ತಿಯನ್ನು ತೋರಿಸುವೆನು.


ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. "ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು.


ತಪ್ಪಲಿಗೆ ಇಳಿದ ದನಕರುಗಳಂತೆ ಆ ಜನರನ್ನು ಕರೆತಂದಿತು ಸ್ವಾಮಿಯ ಆತ್ಮ ಶಾಂತಿ ನಿಲಯಕೆ. ಹೀಗೆ, ಆ ಜನರಿಗೆ ಮಾರ್ಗದರ್ಶಕರಾಗಿ ತಮ್ಮ ನಾಮವನ್ನು ಘನಪಡಿಸಿಕೊಂಡರು ಸ್ವಾಮಿ.


ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”


ಅಂದರೆ, ಅವರು ಈಜಿಪ್ಟ್ ದೇಶದಲ್ಲಿ ಫರೋಹನನ್ನೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡೆಸಿದ ಸೂಚಕ ಮತ್ತು ಮಹತ್ಕಾರ್ಯಗಳನ್ನೂ;


ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ.


ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲೂ ಪರ್ಷಿಯನಾದ ಸೈರೆಷನ ಆಳ್ವಿಕೆಯಲ್ಲೂ ಪ್ರವರ್ಧಿಸುತ್ತಾ ಬಾಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು