Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:21 - ಕನ್ನಡ ಸತ್ಯವೇದವು C.L. Bible (BSI)

21 ಆ ಹೆಸರು ಈಗಲೂ ಸುಸ್ಥಿರವಾಗಿದೆ. ನೀವು ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರ್ಪಡಿಸಿ, ಶಿಕ್ಷಾಹಸ್ತವನ್ನೂ ಪ್ರಯೋಗಿಸಿ, ಮಹಾಭೀತಿಯನ್ನು ಉಂಟುಮಾಡಿ, ನಿಮ್ಮ ಜನರಾದ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದು ಈಗಲೂ ಸ್ಥಿರವಾಗಿದೆ; ನೀನು ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರಿಸಿ, ಶಿಕ್ಷಾಹಸ್ತವನ್ನು ಎತ್ತಿ, ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ನಡಿಸಿ ಭುಜಪರಾಕ್ರಮವನ್ನು ತೋರಿಸಿ ಶಿಕ್ಷಾಹಸ್ತವನ್ನು ಎತ್ತಿ ಮಹಾ ಭೀತಿಯನ್ನುಂಟುಮಾಡಿ ನಿನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದೇಶದೊಳಗಿಂದ ಬರಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೋವನೇ, ನೀನು ಅದ್ಭುತಕಾರ್ಯಗಳನ್ನು ಮಾಡಿ ನಿನ್ನ ಜನರನ್ನು ಈಜಿಪ್ಟಿನಿಂದ ಇಸ್ರೇಲಿಗೆ ಕರೆದುತಂದೆ. ಇದನ್ನು ಬಲವಾದ ಕೈಗಳಿಂದಲೇ ಮಾಡಿದೆ. ನಿನ್ನ ಸಾಮರ್ಥ್ಯ ಆಶ್ಚರ್ಯಕರವಾದದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ, ಲಕ್ಷಣಗಳಿಂದಲೂ, ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:21
18 ತಿಳಿವುಗಳ ಹೋಲಿಕೆ  

ಭುಜಬಲ, ಶಿಕ್ಷಾಹಸ್ತ, ಮಹಾಭೀತಿ, ಮಹತ್ಕಾರ್ಯ, ಸೂಚಕಕಾರ್ಯ, ಇವುಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದರು.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ಹೊರತಂದನು ತನ್ನ ಪ್ರಜೆಯನು ಉಲ್ಲಾಸದಿಂದ I ತಾನಾರಿಸಿಕೊಂಡವರನು ಹರ್ಷೋದ್ಗಾರದಿಂದ II


ಹೊರತಂದನು ಇಸ್ರಯೇಲರನು ಬೆಳ್ಳಿಬಂಗಾರ ಸಹಿತ I ಅವರಾ ಗೋತ್ರದೊಳಿರಲಿಲ್ಲ ಯಾರೊಬ್ಬನೂ ನಿಶ್ಯಕ್ತ II


ತಮ್ಮ ಇಸ್ರಯೇಲ್ ಪ್ರಜೆಗೆ ಸಮನಾದ ಜನಾಂಗ ಲೋಕದಲ್ಲಿ ಬೇರೆ ಯಾವುದಿದೆ? ದೇವರಾದ ತಾವೇ ಬಂದು ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿಸಿಕೊಂಡಿರಿ; ಆಶ್ಚರ್ಯಕರವಾದ ಅದ್ಭುತಕಾರ್ಯಗಳಿಂದ ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರ ಕೈಯಿಂದ ತಮ್ಮ ಪ್ರಜೆಯನ್ನು ತಪ್ಪಿಸಿ, ರಕ್ಷಿಸಿದಿರಿ. ಅನ್ಯಜನಾಂಗಗಳನ್ನು ಅವರ ನಾಡಿನಿಂದ ಹೊರಡಿಸಿಬಿಟ್ಟಿರಿ.


ನಿಮ್ಮ ಪ್ರಜೆಗಳಾದ ಇಸ್ರಯೇಲರಿಗೆ ಸೇರದವನಾದ ಒಬ್ಬ ಪರದೇಶೀಯನು ನಿಮ್ಮ ನಾಮಸ್ತುತಿಗಾಗಿ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು, ನಿಮ್ಮನ್ನು ಪ್ರಾರ್ಥಿಸಿದರೆ,


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.


ಆಗ ನೀವೇ ಕಣ್ಣಾರೆ ನೋಡಿದಂತೆ ಸರ್ವೇಶ್ವರ ವಿಶೇಷ ಪರಿಶೋಧನೆ, ಪವಾಡ, ಮಹತ್ಕಾರ್ಯ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದರಲ್ಲವೆ? ನೀವು ಹೆದರಿಕೊಳ್ಳುವ ಆ ಎಲ್ಲ ಜನಾಂಗಗಳಿಗೂ ಅವರು ಹಾಗೆಯೇ ಮಾಡುವರು.


ತಮ್ಮ ಇಸ್ರಯೇಲ್ ಪ್ರಜೆಗೆ ಸಮಾನಾದ ಜನಾಂಗ ಲೋಕದಲ್ಲಿ ಯಾವುದಿದೆ? ತಾವೇ ಬಂದು ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿಸಿಕೊಂಡು, ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರು ಹಾಗು ಇತರ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವುಗಳ ಕಣ್ಮುಂದೆಯೇ ನಿಮ್ಮ ನಾಡಿನವರ ಪರವಾಗಿ ವಿಸ್ಮಯಕರವಾದ ಮಹತ್ಕಾರ್ಯಗಳನ್ನು ನಡೆಸಿದಿರಿ.


ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. "ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು.


ಅಂದರೆ, ಅವರು ಈಜಿಪ್ಟ್ ದೇಶದಲ್ಲಿ ಫರೋಹನನ್ನೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡೆಸಿದ ಸೂಚಕ ಮತ್ತು ಮಹತ್ಕಾರ್ಯಗಳನ್ನೂ;


ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು