Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:22 - ಕನ್ನಡ ಸತ್ಯವೇದವು C.L. Bible (BSI)

22 ಅವರ ಪೂರ್ವಜರಿಗೆ ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ನಾಡನ್ನು ಅವರಿಗೆ ಅನುಗ್ರಹಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರ ಪಿತೃಗಳಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಯೆಹೋವನೇ, ನೀನು ಈ ಭೂಮಿಯನ್ನು ಇಸ್ರೇಲರಿಗೆ ಕೊಟ್ಟೆ. ನೀನು ಬಹಳ ಕಾಲದ ಹಿಂದೆಯೇ ಈ ಭೂಮಿಯನ್ನು ಅವರ ಪೂರ್ವಿಕರಿಗೆ ಕೊಡುವದಾಗಿ ಮಾತು ಕೊಟ್ಟಿದ್ದೆ. ಇದು ಬಹಳ ಒಳ್ಳೆಯ ಭೂಮಿ. ಇದು ಅನೇಕ ಒಳ್ಳೆ ವಸ್ತುಗಳನ್ನು ಹೊಂದಿರುವ ಒಳ್ಳೆಯ ಭೂಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:22
28 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ಆಮೇಲೆ, ‘ನಾಡುಗಳಲ್ಲೆಲ್ಲಾ ಶ್ರೇಷ್ಠವಾದ ನಾಡಿಗೆ, ಹಾಲೂ ಜೇನೂ ಹರಿಯುವ ಆ ವಾಗ್ದತ್ತನಾಡಿಗೆ ನಿಮ್ಮನ್ನು ಸೇರಿಸೆನು’ ಎಂದು ಮರುಭೂಮಿಯಲ್ಲಿ ಅವರಿಗೆ ಪ್ರಮಾಣಮಾಡಿ ಹೇಳಿದೆ.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.


ಸರ್ವೇಶ್ವರಸ್ವಾಮಿ ಇಸ್ರಯೇಲರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಹೀಗೆ ಅವರಿಗೆ ಕೊಟ್ಟರು. ಇಸ್ರಯೇಲರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.


“ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


“ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬಾಳಿ ಅಭಿವೃದ್ಧಿಯಾಗುವಿರಿ. ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.


ನಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ನಾಡಿಗೆ ನಮ್ಮನ್ನು ಸೇರಿಸುವುದಕ್ಕೆ ಈಜಿಪ್ಟಿನಿಂದ ನಮ್ಮನ್ನು ಬರಮಾಡಿದರು.


ಸರ್ವೇಶ್ವರನ ದೃಷ್ಟಿಯಲ್ಲಿ ಯಾವುದು ನ್ಯಾಯವೋ, ಯೋಗ್ಯವೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭ ಉಂಟಾಗುವುದು ಮತ್ತು ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


“ನಿನ್ನ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ನಿನ್ನ ದೇವರಾದ ಸರ್ವೇಶ್ವರ ಪ್ರಮಾಣಮಾಡಿದ ನಾಡಿಗೆ ನಿನ್ನನ್ನು ಸೇರಿಸಿದಾಗ,


ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.


‘ಸರ್ವೇಶ್ವರ ಪ್ರಮಾಣ ಪೂರ್ವಕವಾಗಿ ವಾಗ್ದಾನ ಮಾಡಿದ ನಾಡಿಗೆ ತನ್ನ ಜನರನ್ನು ಸೇರಿಸಲು ಶಕ್ತಿ ಸಾಲದೆ ಹೋಯಿತು; ಅವರನ್ನು ಮರುಭೂಮಿಯಲ್ಲೇ ಕೊಂದುಹಾಕಿಬಿಟ್ಟ’ ಎಂದುಕೊಳ್ಳುವರು.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು.


ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು