ಯೆರೆಮೀಯ 32:25 - ಕನ್ನಡ ಸತ್ಯವೇದವು C.L. Bible (BSI)25 ದೇವರಾದ ಸರ್ವೇಶ್ವರಾ, ಸಾಕ್ಷಿಗಳನ್ನು ಕರೆಯಿಸಿ, ಕ್ರಯಕೊಟ್ಟು ಹೊಲವನ್ನು ಕೊಂಡುಕೊ ಎಂದು ನೀವು ನನಗೆ ಆಜ್ಞಾಪಿಸಿದಿರಿ. ಆದರೆ ನೋಡಿ, ನಗರವು ಬಾಬಿಲೋನಿಯರ ಕೈವಶವಾಗಲಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಕರ್ತನಾದ ಯೆಹೋವನೇ, ನೀನು ನನಗೆ - ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ ಎಂದು ಅಪ್ಪಣೆಕೊಟ್ಟಿ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೂ ಓ ಸಾರ್ವಭೌಮ ಯೆಹೋವ ದೇವರೇ, ನೀನು ನನಗೆ, ‘ಹೊಲವನ್ನು ಹಣಕ್ಕೆ ಕೊಂಡುಕೋ, ಸಾಕ್ಷಿಗಳನ್ನು ಇಡು,’ ಎಂದು ಹೇಳಿದ್ದೀ. ಆದರೂ ಪಟ್ಟಣವು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಲಾಗಿದೆಯಲ್ಲಾ?” ಅಧ್ಯಾಯವನ್ನು ನೋಡಿ |