ಯೆರೆಮೀಯ 32:36 - ಕನ್ನಡ ಸತ್ಯವೇದವು C.L. Bible (BSI)36 “ಖಡ್ಗ-ಕ್ಷಾಮ-ವ್ಯಾಧಿ ಇವುಗಳಿಂದ ಈ ನಗರವು ಬಾಬಿಲೋನಿನ ಅರಸನ ಕೈ ಹಿಡಿತಕ್ಕೆ ಸಿಕ್ಕಲಿದೆ ಎಂದು ನೀವು ಹೇಳುವ ವಿಷಯದಲ್ಲಿ ಇಸ್ರಯೇಲರ ದೇವರಾದ ಸರ್ವೇಶ್ವರ ಈಗ ಇಂತೆನ್ನುತ್ತಾರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಹೀಗಿರಲು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “‘ಬಾಬಿಲೋನಿನ ರಾಜನು ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು. ಈ ಪಟ್ಟಣವನ್ನು ವಶಪಡಿಸಿಕೊಳ್ಳಲು ಅವನು ಖಡ್ಗ, ಕ್ಷಾಮ, ಭಯಂಕರವಾದ ವ್ಯಾಧಿಗಳನ್ನು ಬಳಸಿಕೊಳ್ಳುವನು’ ಎಂದು ನೀವು ಹೇಳುತ್ತಿದ್ದೀರಿ. ಆದರೆ ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 “ ‘ಹೀಗಾದರೂ ಈಗ ಅದು ಖಡ್ಗದಿಂದಲೂ ಬರದಿಂದಲೂ ವ್ಯಾಧಿಯಿಂದಲೂ ಬಾಬಿಲೋನಿನ ಅರಸನ ಕೈವಶವಾಗಿದೆ,’ ಎಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ಅಧ್ಯಾಯವನ್ನು ನೋಡಿ |