Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:37 - ಕನ್ನಡ ಸತ್ಯವೇದವು C.L. Bible (BSI)

37 ‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:37
35 ತಿಳಿವುಗಳ ಹೋಲಿಕೆ  

ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


“ಆಮೇಲೆ ಅವರನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು. ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಯೇಲ್ ನಾಡನ್ನು ಅವರಿಗೆ ದಯಪಾಲಿಸುವೆನು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


ಹೇ ಪ್ರಭು, ನಮ್ಮ ದೇವಾ, ನಮ್ಮನ್ನುದ್ಧರಿಸು I ನಾಡುನಾಡುಗಳಿಂದ ನಮ್ಮನೊಂದುಗೂಡಿಸು I ನಿನ್ನ ಪವಿತ್ರ ನಾಮವನು ನಾವು ಭಜಿಸುವೆವು I ನಿನ್ನ ಸ್ತುತಿ ಸ್ತೋತ್ರಗಳಲಿ ಹೆಚ್ಚಳ ಪಡುವೆವು II


ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು.


ಯೆಹೂದ್ಯಜನರೂ ಇಸ್ರಯೇಲಿನ ಜನರೂ ಪುನಃ ಒಂದುಗೂಡುವರು. ಒಬ್ಬನೇ ಅಧಿಪತಿಯನ್ನು ಆರಿಸಿಕೊಳ್ಳುವರು. ಅವರೆಲ್ಲರೂ ನಾನಾ ದೇಶಗಳಿಂದ ಹೊರಟುಬರುವರು. ಜೆಸ್ರೀಲಿನ ಆ ದಿನವು ಮಹತ್ತಾದುದು.


ಬದಲಿಗೆ ‘ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ಆ ದಿನದಂದು ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆಗಳ ಹಾಗೂ ಅಂಜೂರದ ಗಿಡಗಳ ನೆರಳಿನಲ್ಲಿ ಸಮಾಧಾನದಿಂದ ವಿಶ್ರಮಿಸಲು ಕರೆಯುವಿರಿ. ಇದು ಸೇನಾಧಿಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ಕರೆದು ತರುವೆನು ನಿಮ್ಮನ್ನು ಆ ಕಾಲದೊಳು ಮರಳಿಸುವೆನು ಮನೆಗೆ ಆ ದಿನದೊಳು. ಹಿಂದಿನ ಸಮೃದ್ಧಿಯನ್ನು ಬರಮಾಡುವೆನು ನಿನ್ನ ಕಣ್ಮುಂದೆ ದೊರಕುವುದಾಗ ನಿನಗೆ ಸ್ತುತಿಕೀರ್ತಿ ಜನಾಂಗಗಳ ಮುಂದೆ.” - ಸರ್ವೇಶ್ವರಸ್ವಾಮಿಯ ನುಡಿಯಿದು.


ಹತರಾದವರು ನಿರ್ದೋಷಿಗಳೆಂದು ನಿರ್ಣಯಿಸುವೆನು. ಕೊಲೆಪಾತಕರನ್ನು ದಂಡಿಸಿಯೇ ತೀರುವೆನು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಜುದೇಯದ ಹಾಗೂ ಇಸ್ರಯೇಲಿನ ಗುಲಾಮಗಿರಿಯನ್ನು ಬಿಡಿಸಿ ಮೊದಲಿನಂತೆಯೆ ಅವುಗಳನ್ನು ಪುನರ್‍ ನಿರ್ಮಿಸುವೆನು.


ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ: ದೂರದ ದ್ವೀಪಗಳಲ್ಲೂ ಅದನ್ನು ಸಾರಿರಿ: ಇಸ್ರಯೇಲರನ್ನು ಚದುರಿಸಿದಾತ ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ.


ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’


ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು.


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ ಕೇಳು, ಕಾಲಬರಲಿದೆ. ಆಗ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವುದನ್ನು ಬಿಟ್ಟುಬಿಡುವರು.


ಬದಲಿಗೆ, ‘ಇಸ್ರಯೇಲರನ್ನು ಉತ್ತರ ದೇಶದಿಂದ ಹಾಗು ಅವರನ್ನು ತಾನು ತಳ್ಳಿಬಿಟ್ಟಿದ್ದ ಎಲ್ಲ ಸೀಮೆಗಳಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ನಾನು ಅವರ ಪೂರ್ವಜರಿಗೆ ದಯಪಾಲಿಸಿದ ನಾಡಿಗೆ ಅವರನ್ನು ಮರಳಿ ಬರಮಾಡುವೆನು.


ನಾನೇ ನಿಮಗೆ ವಿರುದ್ಧವಾಗಿ ಕಡುಕೋಪದಿಂದ, ರೋಷಾವೇಶದಿಂದ, ಕ್ರೋಧಭರಿತನಾಗಿ, ಚಾಚಿದ ಕೈಯಿಂದಲೂ ಭುಜಪರಾಕ್ರಮದಿಂದಲೂ ಯುದ್ಧಮಾಡುವೆನು.


ಅವರ ಮೇಲೆ ಕನಿಕರ ತೋರಿ ಕಟಾಕ್ಷಿಸಿ ಈ ನಾಡಿಗೆ ಮರಳಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡುವುದಿಲ್ಲ; ನೆಡುವೆನು, ಕೀಳುವುದಿಲ್ಲ.


ಈ ನಾಡಿನಲ್ಲಿ ಜನರು ಮನೆ-ಹೊಲ-ತೋಟಗಳನ್ನು ಮತ್ತೆ ಕೊಳ್ಳುವರು ಹಾಗೂ ಕೊಡುವರು. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ,” ಎಂದು ಸ್ಪಷ್ಟವಾಗಿ ಹೇಳಿದೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಜನಾಂಗಗಳಲ್ಲಿ ಚದುರಿಹೋಗಿರುವ ಇಸ್ರಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಹರಿಸುತ್ತಾ, ನಿಮ್ಮನ್ನು ಜನಾಂಗಗಳಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಒಂದುಗೂಡಿಸಿ,


ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು