ಯೆರೆಮೀಯ 32:39 - ಕನ್ನಡ ಸತ್ಯವೇದವು C.L. Bible (BSI)39 ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನಾನು ಅವರ ಹಿತವನ್ನೂ ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು. ಅಧ್ಯಾಯವನ್ನು ನೋಡಿ |