Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:41 - ಕನ್ನಡ ಸತ್ಯವೇದವು C.L. Bible (BSI)

41 ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸ್ಥಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:41
16 ತಿಳಿವುಗಳ ಹೋಲಿಕೆ  

ಅವರ ಮೇಲೆ ಕನಿಕರ ತೋರಿ ಕಟಾಕ್ಷಿಸಿ ಈ ನಾಡಿಗೆ ಮರಳಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡುವುದಿಲ್ಲ; ನೆಡುವೆನು, ಕೀಳುವುದಿಲ್ಲ.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಬೇರೂರಿಸುವೆನು ಅವರನು ಸ್ವಂತ ನಾಡಲಿ ಕೀಳರಾರೂ ಅವರನು ಅಲ್ಲಿಂದ ಮರಳಿ.” ಇದು ನಿನ್ನ ದೇವರಾದ ಸರ್ವೇಶ್ವರನ ನುಡಿ.


ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.


ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.


ಅವರನ್ನು ಕೀಳಲು ಕೆಡವಲು, ಅಳಿಸಲು ಹಾಳುಮಾಡಲು, ಈ ಮೊದಲು ಎಚ್ಚರವಹಿಸಿದ ಹಾಗೆಯೆ ಇನ್ನು ಮುಂದೆ ಅವರನ್ನು ಕಟ್ಟಲು ಹಾಗು ನೆಡಲು ಎಚ್ಚರವಹಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಹಾಗೆಯೇ ಒಂದು ಜನಾಂಗವನ್ನು ಅಥವಾ ಒಂದು ರಾಜ್ಯವನ್ನು ನೆಟ್ಟು ಕಟ್ಟಬೇಕೆಂದು ನಾನು ಎಂದಾದರೂ ಅಪ್ಪಣೆಕೊಡಲು ಸಾಧ್ಯ.


ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂತಾನ, ಪಶು ಹಾಗು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ, ನಿಮಗೆ ಒಳಿತನ್ನುಂಟುಮಾಡುವರು. ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಪೂರ್ಣಹೃದಯದಿಂದಲೂ ಮನಸ್ಸಿನಿಂದಲೂ ಅವರ ಕಡೆಗೆ ತಿರುಗಿಕೊಳ್ಳುವಿರಿ. ಅವರು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲೂ ಮತ್ತೆ ಸಂತೋಷಪಟ್ಟು ನಿಮಗೆ ಒಳಿತನ್ನುಂಟುಮಾಡುವರು.


ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.


ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ I ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ II


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಸರ್ವೇಶ್ವರನಾದ ನಾನೇ ಬಿದ್ದುಹೋದುದನ್ನು ಕಟ್ಟಿ, ಹಾಳಾದುದನ್ನು ಬೆಳೆಯಿಸಿದ್ದೇನೆಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಸರ್ವೇಶ್ವರನಾದ ನಾನೇ ನುಡಿದಿದ್ದೇನೆ, ಹಾಗೆಯೇ ನಡೆಸುತ್ತೇನೆ.”


ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು