ಯೆರೆಮೀಯ 32:42 - ಕನ್ನಡ ಸತ್ಯವೇದವು C.L. Bible (BSI)42 “ಸರ್ವೇಶ್ವರನಾದ ನನ್ನ ಮಾತು ಇವು: ಇಂಥ ಕಠಿಣವಾದ ಕಷ್ಟದುಃಖಗಳನ್ನು ಈ ಜನರ ಮೇಲೆ ಬರಮಾಡಿದಂತೆಯೇ ನಾನು ಇವರಿಗೆ ವಾಗ್ದಾನಮಾಡಿದ ಎಲ್ಲ ಒಳಿತನ್ನೂ ಬರಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಯೆಹೋವನು ಇಂತೆನ್ನುತ್ತಾನೆ, “ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನ ಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಯೆಹೋವನು ಇಂತೆನ್ನುತ್ತಾನೆ - ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರ ಮೇಲೆ ನಾನು ಈ ಮಹಾವಿಪತ್ತನ್ನು ತಂದಿದ್ದೇನೆ. ಅದರಂತೆಯೇ ನಾನು ಅವರಿಗೆ ಒಳಿತನ್ನು ತರುವೆನು. ನಾನು ಅವರಿಗೆ ಒಳ್ಳೆಯದನ್ನು ಮಾಡುವದಾಗಿ ಮಾತುಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 “ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ, ಹಾಗೆಯೇ ನಾನು ವಾಗ್ದಾನ ಮಾಡಿದ ಸಮೃದ್ಧಿಯನ್ನೆಲ್ಲಾ ಅವರ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿ |