ಯೆರೆಮೀಯ 32:44 - ಕನ್ನಡ ಸತ್ಯವೇದವು C.L. Bible (BSI)44 ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಣ ಪ್ರದೇಶ, ಜುದೇಯದ ಊರುಗಳು, ಮಲೆನಾಡಿನ, ಕೆಳನಾಡಿನ, ದಕ್ಷಿಣ ಪ್ರಾಂತ್ಯದ ಊರುಗಳು ಈ ಎಲ್ಲ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿ ಹಾಕಿಸಿ ಕೊಂಡುಕೊಳ್ಳುವರು. ನಾನು ನನ್ನ ಜನರನ್ನು ಗುಲಾಮಗಿರಿಯಿಂದ ಬಿಡಿಸಿ ಬರಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಬೆನ್ಯಮೀನ್ ಸೀಮೆ, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು ಪತ್ರಕ್ಕೆ ರುಜುಹಾಕಿ ಮುಚ್ಚಿ ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವೆನಷ್ಟೆ. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು, ಪತ್ರಗಳನ್ನು ಬರೆದು ಮುದ್ರೆಹಾಕಿ, ಸಾಕ್ಷಿಗಳನ್ನು ಇಟ್ಟುಕೊಳ್ಳುವರು. ಏಕೆಂದರೆ ನಾನು ಅವರ ಸೆರೆಯಿಂದ ಹಿಂದಿರುಗುವಂತೆ ಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ. ಅಧ್ಯಾಯವನ್ನು ನೋಡಿ |