Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:10 - ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಹೀಗೆನ್ನುತ್ತಾರೆ: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಪಾಳುಬಿದ್ದ ಸ್ಥಳವೆಂದು ನೀವು ಕರೆಯುವ ಈ ಸ್ಥಳದಲ್ಲೇ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಜುದೇಯದ ಊರುಗಳಲ್ಲೇ, ಜೆರುಸಲೇಮಿನ ಬೀದಿಗಳಲ್ಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಇಂತೆನ್ನುತ್ತಾನೆ - ಜನಪಶುಗಳಿಲ್ಲದೆ ಹಾಳಾಗಿದೆ ಎಂದು ನೀವೆನ್ನುವ ಈ ಸ್ಥಳದಲ್ಲಿ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇವಿುನ ಬೀದಿಗಳಲ್ಲಿ ಹರ್ಷಧ್ವನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “‘ನಮ್ಮ ದೇಶವು ಒಂದು ಬರಿದಾದ ಮರುಭೂಮಿಯಾಗಿದೆ. ಅಲ್ಲಿ ಜನರಾಗಲಿ ಪ್ರಾಣಿಗಳಾಗಲಿ ವಾಸಿಸುವದಿಲ್ಲ’ ಎಂದು ನೀವು ಹೇಳುತ್ತಿರುವಿರಿ. ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಊರುಗಳಲ್ಲಿ ಈಗ ಮೌನವಿದೆ. ಆದರೆ ಬೇಗನೆ ಅಲ್ಲಿ ಧ್ವನಿಕೇಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:10
9 ತಿಳಿವುಗಳ ಹೋಲಿಕೆ  

ಜನರಿಲ್ಲದೆ, ಪ್ರಾಣಿಗಳಿಲ್ಲದೆ, ಪಾಳುಬಿದ್ದು ಬಾಬಿಲೋನಿಯರ ಕೈವಶವಾಗಿದೆ ಎನ್ನಲಾಗುವ ಈ ನಾಡಿನಲ್ಲಿ ಹೊಲಗದ್ದೆಗಳ ವ್ಯವಹಾರ ನಡೆಯುವುದು.


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


“ಖಡ್ಗ-ಕ್ಷಾಮ-ವ್ಯಾಧಿ ಇವುಗಳಿಂದ ಈ ನಗರವು ಬಾಬಿಲೋನಿನ ಅರಸನ ಕೈ ಹಿಡಿತಕ್ಕೆ ಸಿಕ್ಕಲಿದೆ ಎಂದು ನೀವು ಹೇಳುವ ವಿಷಯದಲ್ಲಿ ಇಸ್ರಯೇಲರ ದೇವರಾದ ಸರ್ವೇಶ್ವರ ಈಗ ಇಂತೆನ್ನುತ್ತಾರೆ:


ನಾನು ನಿಮ್ಮ ನಾಡನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ನೆಲಸುವ ಶತ್ರುಗಳು ಅದನ್ನು ನೋಡಿ ಚಕಿತರಾಗುವರು.


“ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು.


ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.


“ನನ್ನ ಆಲಯ ಹಾಳುಬಿದ್ದಿರುವಾಗ ನೀವು ಸೊಗಸಾದ ಹಲಗೆ ಹೊದಿಸಿದ ಮನೆಗಳಲ್ಲಿ ವಾಸಿಸುವುದು ಸರಿಯೋ?


ತೋರಿಸೆಮಗೆ ಪ್ರಭು ಕರುಣೆಯನು I ಅನುಗ್ರಹಿಸೆಮಗೆ ರಕ್ಷಣೆಯನು II


ಬಲಪಡಿಸಿಹನಾತ ನಿನ್ನ ಹೆಬ್ಬಾಗಿಲ ಅಗುಳಿಗಳನು I ಆಶೀರ್ವದಿಸಿಹನು ನಿನ್ನಲ್ಲಿರುವ ಮಕ್ಕಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು