Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:13 - ಕನ್ನಡ ಸತ್ಯವೇದವು C.L. Bible (BSI)

13 ಮಲೆನಾಡಿನ, ಕೆಳನಾಡಿನ ಹಾಗೂ ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಲ ಪ್ರದೇಶಗಳು, ಜುದೇಯದ ಊರುಗಳು, ಈಎಲ್ಲ ಸ್ಥಳಗಳಲ್ಲಿ ಮಂದೆಗಳು ಲೆಕ್ಕಿಸುವವನ ಕಣ್ಮುಂದೆ ಮತ್ತೆ ಹಾದುಹೋಗುವುವು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕುರಿಗಳು ತಮ್ಮ ಮುಂದೆ ನಡೆದುಕೊಂಡು ಹೋಗುವಾಗ ಕುರುಬರು ಅವುಗಳನ್ನು ಎಣಿಸುವರು. ಇಡೀ ದೇಶದಲ್ಲೆಲ್ಲ ಅಂದರೆ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶಗಳಲ್ಲಿಯೂ ನೆಗೆವ್ ಪ್ರದೇಶದಲ್ಲಿಯೂ ಯೆಹೂದದ ಎಲ್ಲಾ ಊರುಗಳಲ್ಲಿಯೂ ತಮ್ಮ ಕುರಿಗಳನ್ನು ಎಣಿಸುತ್ತಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ, ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಮಂದೆಗಳು ಎಣಿಸುವವನ ಕೈಕೆಳಗೆ ಹಾದುಹೋಗುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:13
9 ತಿಳಿವುಗಳ ಹೋಲಿಕೆ  

ದನಕರುಗಳೇ ಆಗಲಿ, ಆಡುಕುರಿಗಳೇ ಆಗಲಿ, ಒಡೆಯನು ಲೆಕ್ಕಿಸಿದ ಎಲ್ಲ ಪಶುಪ್ರಾಣಿಗಳಲ್ಲಿ ಪ್ರತಿ ಹತ್ತನೆಯದು ಸರ್ವೇಶ್ವರನಿಗೆ ಮೀಸಲಾಗಿರಬೇಕು.


“ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ?


ಜುದೇಯದ ನಗರಗಳು, ಜೆರುಸಲೇಮಿನ ಸುತ್ತಮುತ್ತಲಿನ ಪ್ರದೇಶಗಳು, ಬೆನ್ಯಾಮಿನ್ ಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣ ಪ್ರಾಂತ್ಯ, ಈ ಎಲ್ಲ ಸ್ಥಳಗಳಿಂದ ಸರ್ವಾಂಗಹೋಮಪಶು, ಯಜ್ಞಪಶು, ಧಾನ್ಯನೈವೇದ್ಯ, ಧೂಪ ಮತ್ತು ಕೃತಜ್ಞತಾರ್ಪಣೆ ಇವುಗಳನ್ನು ಜನರು ನನ್ನ ಆಲಯಕ್ಕೆ ತೆಗೆದುಕೊಂಡು ಬರುವರು.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ಈ ನಾಡಿನಲ್ಲಿ ಜನರು ಮನೆ-ಹೊಲ-ತೋಟಗಳನ್ನು ಮತ್ತೆ ಕೊಳ್ಳುವರು ಹಾಗೂ ಕೊಡುವರು. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ,” ಎಂದು ಸ್ಪಷ್ಟವಾಗಿ ಹೇಳಿದೆ.


ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಣ ಪ್ರದೇಶ, ಜುದೇಯದ ಊರುಗಳು, ಮಲೆನಾಡಿನ, ಕೆಳನಾಡಿನ, ದಕ್ಷಿಣ ಪ್ರಾಂತ್ಯದ ಊರುಗಳು ಈ ಎಲ್ಲ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿ ಹಾಕಿಸಿ ಕೊಂಡುಕೊಳ್ಳುವರು. ನಾನು ನನ್ನ ಜನರನ್ನು ಗುಲಾಮಗಿರಿಯಿಂದ ಬಿಡಿಸಿ ಬರಮಾಡುವೆನು.


“ನಾನು ನಿಮ್ಮನ್ನು ಲೆಕ್ಕಿಸುವಂತೆ, ಕೋಲಿನ ಕೆಳಗೆ ಹೋಗುವಂತೆಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು,


ಸೆರೆಹೋಗಿರುವ ಇಸ್ರಯೇಲಿನ ಸೈನಿಕರು ಕಾನಾನ್ ನಾಡನ್ನು ಚಾರೆಪತಿನವರೆಗೆ ವಶಪಡಿಸಿಕೊಳ್ಳುವರು. ಸೆಪಾರದ ಎಂಬಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು