ಯೆರೆಮೀಯ 33:15 - ಕನ್ನಡ ಸತ್ಯವೇದವು C.L. Bible (BSI)15 ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ನಾನು ದಾವೀದನ ವಂಶದಿಂದ ಒಳ್ಳೆಯದಾದ ‘ಮೊಳಕೆಯೊಂದನ್ನು’ ಚಿಗುರಿಸುವೆನು. ಆ ಮೊಳಕೆಯು ದೇಶಕ್ಕೆ ಒಳ್ಳೆಯದನ್ನೂ ನೀತಿಯುತವಾದುದನ್ನೂ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ ‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು. ಅಧ್ಯಾಯವನ್ನು ನೋಡಿ |