Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:16 - ಕನ್ನಡ ಸತ್ಯವೇದವು C.L. Bible (BSI)

16 ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇವಿುನವರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಜೆರುಸಲೇಮಿನಲ್ಲಿ ಜನರು ಸುರಕ್ಷಿತರಾಗಿರುವರು. ಆ ‘ಮೊಳಕೆಯ’ ಹೆಸರು ‘ಯೆಹೋವನು ಒಳ್ಳೆಯವನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:16
20 ತಿಳಿವುಗಳ ಹೋಲಿಕೆ  

ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”


‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!


ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು : “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”


ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ.


ಕಂಡಕಂಡವರೆಲ್ಲರು ಅವರನ್ನು ಕಬಳಿಸಿದ್ದಾರೆ. ಅವರ ವಿರೋಧಿಗಳು, ‘ನಾವು ಅವರನ್ನು ಕಬಳಿಸಿದ್ದು ದೋಷವಲ್ಲ, ಏಕೆಂದರೆ, ಸತ್ಯಸ್ವರೂಪರಾದ ಸರ್ವೇಶ್ವರನಿಗೆ, ತಮ್ಮ ಪೂರ್ವಜರ ನಂಬಿಕೆ ನಿರೀಕ್ಷೆಯಾದ ಸರ್ವೇಶ್ವರನಿಗೆ ವಿರುದ್ಧ ಅವರು ಪಾಪಮಾಡಿದ್ದಾರೆ,’ ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು