Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:2 - ಕನ್ನಡ ಸತ್ಯವೇದವು C.L. Bible (BSI)

2 ಲೋಕವನ್ನು ಸೃಷ್ಟಿಸಿ, ರೂಪಿಸಿ, ಸ್ಥಾಪಿಸಿದವರು ಹಾಗೂ ‘ಸರ್ವೇಶ್ವರ’ ಎಂದು ನಾಮಾಂಕಿತಗೊಂಡ ಅವರು ನನಗೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೋವನು ಭೂಮಿಯನ್ನು ಸೃಷ್ಟಿಸಿದನು. ಆತನೇ ಅದನ್ನು ಸುರಕ್ಷಿತವಾಗಿಡುವನು. ಯೆಹೋವನು ಹೀಗೆನ್ನುತ್ತಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಭೂಮಿಯನ್ನು ಸೃಷ್ಟಿಮಾಡುವ ಯೆಹೋವ ದೇವರೂ ಅದನ್ನು ಸ್ಥಾಪಿಸುವುದಕ್ಕಾಗಿ ಅದನ್ನು ರೂಪಿಸಿದ ಯೆಹೋವನೆಂಬ ಹೆಸರುಳ್ಳವನೂ ಹೇಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:2
21 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


ಸರ್ವೇಶ್ವರನು ಯುದ್ಧಶೂರನು ‘ಸರ್ವೇಶ್ವರ’ ಎಂಬುದು ಆತನ ನಾಮಧೇಯವು.


“ನಾನು ಸರ್ವೇಶ್ವರ, ಅಬ್ರಹಾಮ, ಇಸಾಕ ಹಾಗು ಯಕೋಬರಿಗೆ ನಾನು ‘ಸರ್ವಶಕ್ತನಾದ ದೇವರು ಎಂಬ ಹೆಸರುಳ್ಳವನಾಗಿ ಕಾಣಿಸಿಕೊಂಡನೇ ಹೊರತು ‘ಸರ್ವೇಶ್ವರ’ ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.


ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;


ಜೆರುಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನೆನಪಿಸುತ್ತಿರಬೇಕು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನಿಮಗಿರದಿರಲಿ ವಿಶ್ರಾಂತಿ, ಆತನಿಗೂ ಕೊಡದಿರಿ ವಿರಾಮ.


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ಏಕೆನೆ ಪುನರುದ್ಧರಿಸುವನು ಸಿಯೋನನು I ಪ್ರತ್ಯಕ್ಷಮಾಡುವನಾತ ತನ್ನ ಮಹಿಮೆಯನು II


ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ಏಕೆಂದರೆ, ಶಾಶ್ವತವಾದ ಅಸ್ತಿವಾರವುಳ್ಳ ಅಂದರೆ, ದೇವರೇ ನಿಯೋಜಿಸಿ ನಿರ್ಮಿಸಿದ ನಗರವನ್ನು ಆತನು ಎದುರುನೋಡುತ್ತಿದ್ದನು.


ಉನ್ನತದಲ್ಲಿ ಹಲವು ಉಪ್ಪರಿಗೆಗಳನ್ನು ನಿರ್ಮಿಸುವವ ಆತನೆ ಭುವಿಯಲ್ಲಿ ಗುಮ್ಮಟವನ್ನು ಸ್ಥಾಪಿಸಿಕೊಂಡವನು ಆತನೆ ಸಾಗರದ ನೀರನ್ನು ಸೇದಿ ಧರೆಯ ಮೇಲೆ ಸುರಿಯುವವ ಆತನೆ ಆತನ ನಾಮಧೇಯ ಸರ್ವೇಶ್ವರಸ್ವಾಮಿ ಎಂಬುದೇ.


ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,


ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ಸರ್ವೇಶ್ವರ : “ಆದುದರಿಂದ ಇಗೋ, ಇಂದೊಮ್ಮೆ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು. ಚೆನ್ನಾಗಿ ಗ್ರಹಿಸುವಂತೆ ಮಾಡುವೆನು. ನನ್ನ ನಾಮಧೇಯ ಸರ್ವೇಶ್ವರ ಎಂದೇ ಅವರು ಗುರುತು ಹಚ್ಚುವರು.”


ಯಕೋಬ್ಯರಿಗೆ ಸ್ವಂತವಾದ ದೇವರು ಅವುಗಳ ಹಾಗಲ್ಲ ಆತ ಸಮಸ್ತವನ್ನು ಸೃಷ್ಟಿಸಿದಾತ ಆತನ ಸೊತ್ತು ಇಸ್ರಯೇಲ್ ವಂಶ ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ಆತನ ನಾಮಧೇಯ.


ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು