Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:22 - ಕನ್ನಡ ಸತ್ಯವೇದವು C.L. Bible (BSI)

22 ಆದರೆ, ನನ್ನ ದಾಸ ದಾವೀದನ ಸಂತಾನವನ್ನು ಅಸಂಖ್ಯಾತ ನಕ್ಷತ್ರಗಣದಷ್ಟು ಹೆಚ್ಚಿಸುವೆನು. ನನ್ನ ಪರಿಚಾರಕರಾದ ಲೇವಿಯ ಸಂಖ್ಯೆಯನ್ನು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆ ನಡಿಸುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:22
23 ತಿಳಿವುಗಳ ಹೋಲಿಕೆ  

ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.


ಹೀಗೆ ಮೃತಪ್ರಾಯನಾಗಿದ್ದ ಒಬ್ಬ ವ್ಯಕ್ತಿ ಆಕಾಶದ ನಕ್ಷತ್ರಗಳಂತೆಯೂ ಕಡಲ ತೀರದ ಮರಳಿನಂತೆಯೂ ಅಸಂಖ್ಯಾತವಾದ ಸಂತತಿಗೆ ತಂದೆಯಾದನು.


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.


ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು ಇಸ್ರಯೇಲ್ ವಂಶವನ್ನು ನಾನು ನಿರಾಕರಿಸಿಬಿಡಲು ಸಾಧ್ಯ.


ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸಿಕೊಳ್ಳುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


“ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.


ಉಳಿಸುವೆನು ಅವನ ಸಂತಾನವನು ನಿರಂತರವಾಗಿ I ಅವನ ಸಿಂಹಾಸನವಿರುವುದು ಗಗನದಂತೆ ಸ್ಥಿರವಾಗಿ II


ವಂದಿಪುದು ಪ್ರಭುವನು ಮುಂದಿನ ಪೀಳಿಗೆ I ಸಾರುವುದಾತನ ವದಂತಿಯನು ಜನರಿಗೆ II


ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.


ಅಗಣಿತವಾಗಿರುತ್ತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ.”


ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.


ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗೂ ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಕುಲದಲ್ಲಿ ಇದ್ದೇ ಇರುವನು.”


ಇದಲ್ಲದೆ ಸರ್ವೇಶ್ವರ ಯೆರೆಮೀಯನಿಗೆ ಈ ವಾಕ್ಯವನ್ನು ಅನುಗ್ರಹಿಸಿದರು:


ನಾನು ಅವರ ಅಪ್ಪಣೆಯಂತೆ ನುಡಿದೆ. ಇಗೋ, ಶ್ವಾಸವು ಅವುಗಳಲ್ಲಿ ಹೊಕ್ಕಿತು. ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ದೊಡ್ಡ ಸೈನ್ಯವಾದವು.


“ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: ‘ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯೆ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು.


“ಸಭೆ ಸೇರಿಸುವೆನವರನು ನಿಸ್ಸಂದೇಹವಾಗಿ ವಿಮುಕ್ತಗೊಳಿಸುವೆನವರನು ಕರೆದು ಸನ್ನೆಮಾಡಿ ಹಿಂದಿನಂತೆ ಮುಂದೆಯೂ ಬೆಳೆವರವರು ಸಮೃದ್ಧಿಯಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು