Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:24 - ಕನ್ನಡ ಸತ್ಯವೇದವು C.L. Bible (BSI)

24 “ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೇ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನು ತಾನು ಆರಿಸಿಕೊಂಡ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದಾನೆ ಎಂದು ಈ ಜನರು ಆಡಿಕೊಳ್ಳುವ ಮಾತು ನಿನ್ನ ಲಕ್ಷ್ಯಕ್ಕೆ ಬರಲಿಲ್ಲವೋ? ಇವರು ಜನಾಂಗವೇ ಅಲ್ಲ ಎನ್ನುವಷ್ಟು ನನ್ನ ಜನರನ್ನು ಅಸಡ್ಡೆಮಾಡುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಯೆರೆಮೀಯನೇ, ಜನರು ಏನು ಹೇಳಿದರೆಂಬುದನ್ನು ಕೇಳಲಿಲ್ಲವೇ? ‘ಯೆಹೋವನು ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಎರಡು ಕುಟುಂಬಗಳನ್ನು ಆರಿಸಿಕೊಂಡನು; ಆದರೆ ಈಗ ಅವರನ್ನು ತಿರಸ್ಕರಿಸಿದ್ದಾನೆ.’ ಎಂದು ಅವರು ಹೇಳುತ್ತಿದ್ದಾರೆ. ಅನ್ಯಜನರು ನನ್ನ ಜನರನ್ನು ಎಷ್ಟು ದ್ವೇಷಿಸುತ್ತಾರೆಂದರೆ, ಅವರು ಒಂದು ಜನಾಂಗವಾಗಿ ಮುಂದುವರಿಯುವುದು ಅವರಿಗೆ ಇಷ್ಟವೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:24
29 ತಿಳಿವುಗಳ ಹೋಲಿಕೆ  

ಇಂತೆನ್ನುತಿಹರು : “ಬನ್ನಿ ಸಂಹರಿಸೋಣ I ಆತನ ಜನಾಂಗ ಉಳಿಯದಂತೆ ಮಾಡೋಣ I ಇಸ್ರಯೇಲೆಂಬ ನಾಮವನಳಿಸಿಬಿಡೋಣ” II


ಅಲ್ಲಿ ಇಸ್ರಯೇಲಿನ ಪರ್ವತಗಳ ಮೇಲೆ, ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿರರು; ಭಿನ್ನರಾಜ್ಯದವರಾಗಿ ಇರರು.


ಶತ್ರು ನಿಮ್ಮನ್ನು ನೋಡಿ, ‘ಆಹಾ ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ಎಂದು ಹಿಗ್ಗಿಕೊಂಡದ್ದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಸರ್ವೇಶ್ವರನಾದ ದೇವರ ಅಪ್ಪಣೆಯಾಯಿತು.”


“ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.”


ಸರ್ವೇಶ್ವರನಾದ ದೇವರ ವಾಕ್ಯವನ್ನು ಕೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದುದ್ದನ್ನು, ಇಸ್ರಯೇಲ್ ನಾಡು ಪಾಳುಬಿದ್ದುದನ್ನು, ಯೆಹೂದ್ಯವಂಶದವರು ಗಡೀಪಾರಾದುದನ್ನು ನೋಡಿ ನೀನು ಹಿರಿಹಿರಿ ಹಿಗ್ಗಿಹೋದೆ.


ಅವರನ್ನು ನೋಡುವವರೂ “ತೊಲಗಿರಿ, ನೀವು ಅಶುದ್ಧರು ನಡೆಯಿರಿ, ನಡೆಯಿರಿ, ಮುಟ್ಟಬೇಡಿ” ಎಂದು ಕೂಗುತ್ತಿರುವರು. ಅವರು ಓಡಿ ಅನ್ಯನಾಡುಗಳಲ್ಲಿ ಅಲೆಯುತ್ತಿರಲು “ಇವರು ಇನ್ನು ಇಲ್ಲಿ ತಂಗಕೂಡದು” ಎನ್ನುತಿಹರು ಅಲ್ಲಿನ ನಾಡಿಗರು.


‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.


ತಳ್ಳಿಬಿಡಲು ಪ್ರಭು ತನ್ನ ಜನರನು I ಕೈಬಿಡನವನು ತನ್ನ ಸ್ವಕೀಯರನು II


“ಹಿಡಿಯಿರಿ ಬೆನ್ನಟ್ಟಿ, ದೇವನವನನ್ನು ಕೈಬಿಟ್ಟಿಹನು I ರಕ್ಷಿಸುವಂಥವರಾರು ಇನ್ನಿಲ್ಲ” ಎನ್ನುತಿಹರು II


ಸರ್ವೇಶ್ವರ ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಭೀಕರ ದಿನಗಳನ್ನು ಬರಮಾಡುವರು. ಇಸ್ರಯೇಲ್ ರಾಜ್ಯ ಜುದೇಯ ನಾಡಿನಿಂದ ಬೇರ್ಪಟ್ಟ ದಿನ ಮೊದಲುಗೊಂಡು ಇದುವರೆಗೂ ಅಂಥ ದಿನಗಳು ಬಂದಿರಲಿಲ್ಲ. ಅಸ್ಸೀರಿಯದ ಅರಸನೇ ಆ ದುರ್ದಿನಗಳ ಪ್ರತೀಕ.


ತೊಲಗುವುದು ಎಫ್ರಯಿಮಿನ ಹೊಟ್ಟೆಕಿಚ್ಚು, ನಿರ್ಮೂಲವಾಗುವುದು ಜುದೇಯದ ವೈರಿಗಳ ಒಳಸಂಚು. ಎಫ್ರಯಿಮ್, ಜುದೇಯವನ್ನು ಮತ್ಸರಿಸದು; ಜುದೇಯ, ಎಫ್ರಯಿಮನ್ನು ವಿರೋಧಿಸದು.


ಅವಳು ಇಂಥವುಗಳನ್ನೆಲ್ಲ ಮಾಡಿದ ಮೇಲೆ ನನ್ನ ಬಳಿಗೆ ಮರಳಿ ಬಂದೇ ಬರುವಳು ಎಂದುಕೊಂಡಿದ್ದೆ. ಆದರೆ ಬರಲಿಲ್ಲ. ಆಗ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ಇದನ್ನು ನೋಡಿದಳು.


ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು.


ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು ಇಸ್ರಯೇಲ್ ವಂಶವನ್ನು ನಾನು ನಿರಾಕರಿಸಿಬಿಡಲು ಸಾಧ್ಯ.


ಇದಲ್ಲದೆ ಸರ್ವೇಶ್ವರ ಯೆರೆಮೀಯನಿಗೆ ಈ ವಾಕ್ಯವನ್ನು ಅನುಗ್ರಹಿಸಿದರು:


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಓಹೋ, ಇವರು ಸರ್ವೇಶ್ವರನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದೆನಿಸಿಕೊಂಡರು. ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತಂದರು.


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


ಎದೋಮ್ಯರ ಪಾಳೆಯದವರು ಇಷ್ಮಾಯೇಲ್ಯರು, I ಗೇಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, II


ಆತನ ಮಾತು ಇವು - ಈ ಪ್ರಕೃತಿ ನಿಯಮ ನನ್ನ ಪರಾಂಬರಿಕೆಯಲ್ಲಿ ಇರುವತನಕ ಒಂದು ರಾಷ್ಟ್ರವಾಗಿ ಉಳಿವುದು ಇಸ್ರಯೇಲ್ ಸಂತಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು