Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:26 - ಕನ್ನಡ ಸತ್ಯವೇದವು C.L. Bible (BSI)

26 ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:26
17 ತಿಳಿವುಗಳ ಹೋಲಿಕೆ  

ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು ಇಸ್ರಯೇಲ್ ವಂಶವನ್ನು ನಾನು ನಿರಾಕರಿಸಿಬಿಡಲು ಸಾಧ್ಯ.


ದಯೆತೋರಿಸುವರು ಸರ್ವೇಶ್ವರ ಯಕೋಬ್ಯರಿಗೆ, ಆರಿಸಿಕೊಳ್ಳುವರು ಮತ್ತೆ ಇಸ್ರಯೇಲರನ್ನೆ, ನೆಲೆಗೊಳಿಸುವರವರನ್ನು ತಾಯಿನಾಡಿನಲ್ಲೆ. ಹೊರನಾಡಿಗರು ಕೂಡಿಕೊಳ್ಳುವರು ಅವರೊಡನೆ, ಸೇರಿಕೊಳ್ಳುವರವರು ಯಕೋಬ ಮನೆತನಕ್ಕೆ.


ನನ್ನ ನಾಮದ ಪ್ರಯುಕ್ತವೇ, ಮಾಡುವೆನು ಇಸ್ರಯೇಲ್ ಏಳಿಗೆಯಾಗುವಂತೆ ಜಗದೊಳಗೆ ತೋರಿಸುವೆನು ಪ್ರೀತಿವಾತ್ಸಲ್ಯವನ್ನು ಲೋರುಹಾಮಳಿಗೆ ಹೇಳುವೆನು ‘ನೀನು ನನ್ನ ಪ್ರಜೆ’ಯೆಂದು ಲೋಅಮ್ಮಿಗೆ ಭಜಿಸುವರವರು ‘ನೀವೇ ನಮ್ಮ ದೇವರು’ ಎಂದು ನನಗೆ.


ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


ತಟ್ಟನೆ ಉಕ್ಕಿ ಹರಿಯುವ ಕೋಪದಿಂದ ಕ್ಷಣಮಾತ್ರ ಮುಖಮರೆಸಿಕೊಂಡೆ ನಿನ್ನಿಂದ ಕರುಣಿಸುವೆನು ನಿನ್ನನು ಶಾಶ್ವತ ಕೃಪೆಯಿಂದ.” ಇಂತೆನ್ನುತಿಹನು ನಿನ್ನ ಉದ್ಧಾರಕ ಸರ್ವೇಶ್ವರ.


ಏಕೆಂದರೆ, ಸರ್ವರೂ ತಮ್ಮ ಕರುಣೆಯನ್ನು ಸವಿಯುವಂತೆ ದೇವರು ಎಲ್ಲರನ್ನು ಅವಿಧೇಯತೆ ಎಂಬ ಬಂಧನಕ್ಕೆ ಒಳಪಡಿಸಿದ್ದಾರೆ.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.


ಹೀಗೆ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದೇವಸ್ಥಾನದ ಪರಿಚಾರಕರು, ಜನಸಾಮಾನ್ಯರಲ್ಲಿ ಕೆಲವರು, ತಮತಮಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು. ಉಳಿದ ಎಲ್ಲ ಇಸ್ರಯೇಲರು ತಮ್ಮ ತಮ್ಮ ಪಟ್ಟಣಗಳಲ್ಲೇ ವಾಸಿಸಿದರು.


ಸೆರೆಯಿಂದ ಮರಳಿ ಬಂದ ಯೆಹೂದ್ಯ ಸಮಾಜದವರ ಅಂಕೆಸಂಖ್ಯೆ ಹೀಗಿದೆ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಾಬಿಲೋನಿನ ಸೆರೆಯಲ್ಲಿ ಬಂಧಿಸಿದ್ದವರಲ್ಲಿ ಬಿಡುಗಡೆ ಹೊಂದಿ ಹಿಂತಿರುಗಿದವರು ಇವರು:


ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.


“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?


ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II


ಸರ್ವೇಶ್ವರನು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದಾತ. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದಾತ. ಅಲೆಗಳು ಭೋರ್ಗರೆವಷ್ಟು ಸಮುದ್ರವನ್ನು ಕೆರಳಿಸುವಾತ ‘ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮಧೇಯದಿಂದ ಪ್ರಸಿದ್ಧನಾತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು