Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:3 - ಕನ್ನಡ ಸತ್ಯವೇದವು C.L. Bible (BSI)

3 “ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ‘ಯೆಹೂದವೇ, ನನಗೆ ಪ್ರಾರ್ಥಿಸು. ಆಗ ನಾನು ನಿನಗೆ ಉತ್ತರಿಸುವೆನು. ನಾನು ನಿನಗೆ ಬಹು ಮುಖ್ಯವಾದ ರಹಸ್ಯಗಳನ್ನು ತಿಳಿಸುತ್ತೇನೆ. ಈ ಸಂಗತಿಗಳನ್ನು ನೀನು ಹಿಂದೆಂದೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:3
29 ತಿಳಿವುಗಳ ಹೋಲಿಕೆ  

ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಬರುವಿರಿ; ನಾನು ಕಿವಿಗೊಡುವೆನು.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನೋಡು, ನೀ ಕೇಳಿದವೆಲ್ಲ ನಡೆದಿದೆಯೊ ಇಲ್ಲವೋ ಎಂಬುದನು. ಆದರೂ ಘೋಷಿಸುತ್ತಾರೆಯೇ ನಿನ್ನವರು ಅವುಗಳನ್ನು? ಅರುಹುವೆನು ನಿನಗಿಂದಿನಿಂದ ಹೊಸ ಸಂಗತಿಗಳನು ಈವರೆಗೂ ನೀನರಿಯದ ಗುಪ್ತ ವಿಷಯಗಳನು.


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


“ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಪ್ರಭುವಿನ ಮಾರ್ಗ ಧರ್ಮಸಮ್ಮತ I ಆತನ ಕಾರ್ಯವೆಲ್ಲ ಪುನೀತ II


ನಾವು ಮೊರೆಯಿಡುವಾಗಲೆಲ್ಲಾ ನಮ್ಮ ದೇವರಾದ ಸರ್ವೇಶ್ವರ ನಮಗೆ ಸಮೀಪವಾಗಿರುವಂತೆ ಬೇರೆ ಯಾವ ಜನಾಂಗಕ್ಕೆ, ಅದೆಷ್ಟೇ ದೊಡ್ಡದಾಗಿರಲಿ, ಯಾವ ದೇವರು ಹೀಗೆ ಸಮೀಪವಾಗಿರುತ್ತಾರೆ?


ಪ್ರಭುವಿನ ನಾಮಸ್ಮರಣೆ ಮಾಡುವವರೆಲ್ಲ ಪಡೆಯುವರಾಗ ಜೀವೋದ್ಧಾರ.


ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಹೆಸರು ಹಿಡಿದು ನಿನ್ನ ಕರೆಯುವ ಸರ್ವೇಶ್ವರ ನಾನು ಕೊಡುವೆ ನಾ ನಿನಗೆ ಕತ್ತಲಲಿ ಬಚ್ಚಿಟ್ಟ ಭಂಡಾರಗಳನು ಗುಪ್ತಸ್ಥಳಗಳಲ್ಲಿ ಮರೆಮಾಡಿರುವ ನಿಧಿನಿಕ್ಷೇಪಗಳನು. ಈ ಪರಿ ಅರಿತುಕೊಳ್ಳುವೆ ನೀನು ನಾನೇ ಇಸ್ರಯೇಲರ ದೇವರೆಂಬುದನು.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


“ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.


ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


“ಸರ್ವೇಶ್ವರ ಕೊಟ್ಟ ಉತ್ತರವೇನು? ಸರ್ವೇಶ್ವರ ನುಡಿದದ್ದು ಏನು?” ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


“ನೋಡು, ನಾನು ಸರ್ವೇಶ್ವರ, ನರಪ್ರಾಣಿಗಳಿಗೆ ದೇವರು. ನನಗೆ ಅಸಾಧ್ಯವಾದುದು ಯಾವುದು?


“ನಾವು ಬಾಬಿಲೋನಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರುವಂತೆ ಬೇಡಿಕೊಳ್ಳೋಣ,” ಎಂದು ಹೇಳಿದನು.


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ನನ್ನ ಪಿತೃಗಳ ದೇವಾ, ಮಾಡುವೆ ನಿನ್ನ ಗುಣಗಾನ, ನಿನಗೆ ನನ್ನ ಧನ್ಯವಾದ. ಏಕೆಂದರೆ ನೀನೇ ನನಗೆ ಜ್ಞಾನಶಕ್ತಿಗಳನ್ನು ದಯಪಾಲಿಸಿದಾತ. ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಾತ ನೀನೇ ಹೌದು, ರಾಜ ಬಯಸಿದ ಗುಟ್ಟನ್ನು ನಮಗೆ ವ್ಯಕ್ತಪಡಿಸಿದಾತ ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು