Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:5 - ಕನ್ನಡ ಸತ್ಯವೇದವು C.L. Bible (BSI)

5 ಈ ಊರಿನವರು ಬಾಬಿಲೋನಿಯರ ವಿರುದ್ಧ ಕದನಕ್ಕೆ ಹೊರಟರೆ ಏನು ಪ್ರಯೋಜನ? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರಷ್ಟೆ. ಇವರ ಅಧರ್ಮದ ನಿಮಿತ್ತ ಈ ನಗರಕ್ಕೆ ವಿಮುಖವಾಗಿ, ಕಡುಕೋಪಾವೇಶನಾಗಿ ನಾನೇ ಇವರನ್ನು ಸದೆಬಡಿಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪರೋಷಭರಿತನಾದ ನಾನೇ ಇವರನ್ನು ಹತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “‘ಜೆರುಸಲೇಮಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ನಾನು ಅವರ ಮೇಲೆ ಕೋಪಗೊಂಡಿದ್ದೇನೆ; ಅವರಿಗೆ ವಿರುದ್ಧವಾಗಿದ್ದೇನೆ. ನಾನು ಅಲ್ಲಿ ಬಹಳ ಜನರನ್ನು ಕೊಂದುಹಾಕುವೆನು. ಬಾಬಿಲೋನಿನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡಲು ಬರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತದೇಹಗಳು ಕಣ್ಣಿಗೆ ಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:5
16 ತಿಳಿವುಗಳ ಹೋಲಿಕೆ  

ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರುವ ತನಕ ಅಲ್ಲೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಸರ್ವೇಶ್ವರನ ನುಡಿ’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.


ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’


ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.”


ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


ಶತ್ರುಗಳು ಮೇಲೆ ಬಿದ್ದು ದಾಳಿಮಾಡಲು ಬಂದಾಗ ಮೂಡಣ ಬಿರುಗಾಳಿ ಮುಂದೆ ಧೂಳಿ ಮಣ್ಣಿನಂತೆ ನನ್ನ ಜನರನ್ನು ದಿಕ್ಕುಪಾಲಾಗಿ ಚದರಿಸುವೆನು. ಅವರ ಆ ವಿಪತ್ತಿನ ದಿನದಂದು ಅವರತ್ತ ಮುಖತಿರುಗಿಸದೆ ಬೆನ್ನು ಮಾಡುವೆನು.”


ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’


ಸ್ವಾಮಿ ತಿರಸ್ಕರಿಸಿಬಿಟ್ಟಿದ್ದಾನೆ ತನ್ನ ಬಲಿಪೀಠವನ್ನೇ ಅಸಹ್ಯಗೊಂಡು ತೊರೆದುಬಿಟ್ಟಿದ್ದಾನೆ ತನ್ನ ಪವಿತ್ರಸ್ಥಾನವನ್ನೇ ಸಿಯೋನ್ ಅರಮನೆಯ ಗೋಡೆಗಳನ್ನು ಕೆಡವಲು ಬಿಟ್ಟಿದ್ದಾನೆ ಹಗೆಗಳನ್ನೇ. ಹಬ್ಬಹರಿದಿನಗಳ ಜಯಘೋಷವೋ ಎಂಬಂತೆ ಘೋಷಣೆ ಹಾಕುತ್ತಿದ್ದಾರಲ್ಲಾ ಶತ್ರುಗಳು ಸರ್ವೇಶ್ವರನ ಮಂದಿರದಲ್ಲೆ !


ಅವರು ನನ್ನನ್ನು ಬಿಟ್ಟು, ಇತರ ದೇವರುಗಳನ್ನು ಆಶ್ರಯಿಸಿ, ಬಹಳ ದುಷ್ಕೃತ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು