Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:6 - ಕನ್ನಡ ಸತ್ಯವೇದವು C.L. Bible (BSI)

6 ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:6
36 ತಿಳಿವುಗಳ ಹೋಲಿಕೆ  

ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ I ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ II


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


“ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.


ಹೇ ಸರ್ವೇಶ್ವರಾ, ನನ್ನನ್ನು ಸ್ವಸ್ಥಪಡಿಸಿರಿ, ನಾನು ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸಿರಿ, ನಾನು ರಕ್ಷಿತನಾಗಿಯೆ ತೀರುವೆನು. ನೀವೇ ನನಗೆ ಸ್ತುತ್ಯಾರ್ಹರು !


ಬಗೆಹರಿಸುವನಾತ ಹಲವು ರಾಷ್ಟ್ರಗಳಾ ವ್ಯಾಜ್ಯವನು ತೀರಿಸುವನು ಪ್ರಬಲ ಜನಾಂಗಗಳಿಗೆ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮ ಕತ್ತಿಗಳನು ಮಾರ್ಪಡಿಸುವರು ಅವುಗಳನ್ನು ಗುಳಗಳನ್ನಾಗಿ ಭರ್ಜಿಗಳನ್ನೂ ಕುಡುಗೋಲುಗಳನ್ನಾಗಿ.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.


ದೀನದಲಿತರು ಬಾಧ್ಯಸ್ಥರಾಗುವರು ನಾಡಿಗೆ I ಆನಂದಿಸುವರು ಅಲ್ಲಿ ದೊರಕುವ ಸುಖಶಾಂತಿಗೆ II


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.


ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ I ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ II


ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,


ಆಗ ರಾಜ ಹಿಜ್ಕೀಯನು ಹೇಗೂ ತನ್ನ ಜೀವಮಾನದಲ್ಲಿ ಶಾಂತಿ ಸೌಭಾಗ್ಯ ಇರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ನೀನು ತಿಳಿಸಿದ ಸರ್ವೇಶ್ವರ ಸ್ವಾಮಿಯ ಮಾತು ಹಿತಕರವಾದುದು,” ಎಂದು ಉತ್ತರಕೊಟ್ಟನು.


ಸರ್ವೇಶ್ವರ : “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.”


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II


ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.


“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.


ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.


ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು