Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:7 - ಕನ್ನಡ ಸತ್ಯವೇದವು C.L. Bible (BSI)

7 ಜುದೇಯದ ಹಾಗೂ ಇಸ್ರಯೇಲಿನ ಗುಲಾಮಗಿರಿಯನ್ನು ಬಿಡಿಸಿ ಮೊದಲಿನಂತೆಯೆ ಅವುಗಳನ್ನು ಪುನರ್‍ ನಿರ್ಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಊರ್ಜಿತಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದ ಮತ್ತು ಇಸ್ರೇಲುಗಳಿಗೆ ಮತ್ತೊಮ್ಮೆ ಒಳ್ಳೆಯದಾಗುವಂತೆ ಮಾಡುವೆನು. ಅವರನ್ನು ನಾನು ಮೊದಲಿನಂತೆ ಶಕ್ತಿಶಾಲಿಗಳನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:7
28 ತಿಳಿವುಗಳ ಹೋಲಿಕೆ  

ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”


ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.


ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಣ ಪ್ರದೇಶ, ಜುದೇಯದ ಊರುಗಳು, ಮಲೆನಾಡಿನ, ಕೆಳನಾಡಿನ, ದಕ್ಷಿಣ ಪ್ರಾಂತ್ಯದ ಊರುಗಳು ಈ ಎಲ್ಲ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿ ಹಾಕಿಸಿ ಕೊಂಡುಕೊಳ್ಳುವರು. ನಾನು ನನ್ನ ಜನರನ್ನು ಗುಲಾಮಗಿರಿಯಿಂದ ಬಿಡಿಸಿ ಬರಮಾಡುವೆನು.


ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.


ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’


‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಅವರನ್ನು ಕೀಳಲು ಕೆಡವಲು, ಅಳಿಸಲು ಹಾಳುಮಾಡಲು, ಈ ಮೊದಲು ಎಚ್ಚರವಹಿಸಿದ ಹಾಗೆಯೆ ಇನ್ನು ಮುಂದೆ ಅವರನ್ನು ಕಟ್ಟಲು ಹಾಗು ನೆಡಲು ಎಚ್ಚರವಹಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಅವನ ಸಂತಾನ ಹಿಂದಿನ ಸುಸ್ಥಿತಿಯನ್ನು ಹೊಂದುವುದು ಅವರ ಸಮಾಜ ನನ್ನ ಮುಂದೆ ನೆಲೆಯಾಗಿ ನಿಲ್ಲುವುದು ಅವರನ್ನು ಬಾಧಿಸುವವರನ್ನೆಲ್ಲ ನಾನು ದಂಡಿಸುವೆನು.


ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ಅವರ ಮೇಲೆ ಕನಿಕರ ತೋರಿ ಕಟಾಕ್ಷಿಸಿ ಈ ನಾಡಿಗೆ ಮರಳಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡುವುದಿಲ್ಲ; ನೆಡುವೆನು, ಕೀಳುವುದಿಲ್ಲ.


ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು.


ಬತ್ತಿದ ನದಿಯಲಿ ನೀರು ಮರಳಿ ಉಕ್ಕಿ ಹರಿವಂತೆ I ನೀಡು ಸಿರಿ ಸೌಭಾಗ್ಯ, ಹೇ ಪ್ರಭೂ, ನಮಗೆ ಮತ್ತೆ II


ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II


“ಮತ್ತೊಮ್ಮೆ ನೀನು ಹೀಗೆಂದು ಘೋಷಿಸು: ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. ಇನ್ನು ನನ್ನ ಪಟ್ಟಣದಲ್ಲಿ ಸಿರಿಸಂಪತ್ತು ತುಂಬಿತುಳುಕುವುದು. ಸರ್ವೇಶ್ವರ ಸಿಯೋನನ್ನು ಪುನಃ ಸಂತೈಸುವರು. ಜೆರುಸಲೇಮ್ ನಗರವನ್ನು ಪುನಃ ತನ್ನದಾಗಿ ಆರಿಸಿಕೊಳ್ಳುವರು’.”


ಕರೆದು ತರುವೆನು ನಿಮ್ಮನ್ನು ಆ ಕಾಲದೊಳು ಮರಳಿಸುವೆನು ಮನೆಗೆ ಆ ದಿನದೊಳು. ಹಿಂದಿನ ಸಮೃದ್ಧಿಯನ್ನು ಬರಮಾಡುವೆನು ನಿನ್ನ ಕಣ್ಮುಂದೆ ದೊರಕುವುದಾಗ ನಿನಗೆ ಸ್ತುತಿಕೀರ್ತಿ ಜನಾಂಗಗಳ ಮುಂದೆ.” - ಸರ್ವೇಶ್ವರಸ್ವಾಮಿಯ ನುಡಿಯಿದು.


ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕಾಲ ಬರಲಿದೆ. ಆಗ ಸರ್ವೇಶ್ವರನಾದ ನನ್ನ ಮಹಿಮೆಗಾಗಿ ಈ ನಗರವನ್ನು ಹನನೇಲನ ಗೋಪುರದಿಂದ ಮೂಲೆ ಬಾಗಿಲವರೆಗೆ ವಿಸ್ತರಿಸಲಾಗುವುದು.


ಸರ್ವೇಶ್ವರ ಹೀಗೆನ್ನುತ್ತಾರೆ: “ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ಬರುವರು. ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಸರ್ವೇಶ್ವರನನ್ನು ಮರೆಹೋಗುವರು.


‘ಸಿಯೋನ್’ ನಾರಿಮಣಿಯೇ, ನಿನ್ನ ದೋಷದ ಫಲವನ್ನು ಅನುಭವಿಸಿ ಆಗಿದೆ. ಸರ್ವೇಶ್ವರನು ಮತ್ತೆ ಒಯ್ಯನು ನಿನ್ನನ್ನು ಸೆರೆಗೆ. ‘ಎದೋಮ್’ ನಾರಿಮಣಿಯೇ, ನಿನ್ನ ದೋಷದ ನಿಮಿತ್ತ ಸರ್ವೇಶ್ವರನು ನಿನ್ನನ್ನು ದಂಡಿಸುವನು ನಿನ್ನ ಪಾಪಾಕ್ರಮಗಳನ್ನು ಬಯಲಿಗೆ ಎಳೆಯುವನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ಆಲಿಸಿ ಕೇಳು ನಿನ್ನ ಕಾವಲುಗಾರರ ಕೂಗನು : ಸರ್ವೇಶ್ವರ ಸಿಯೋನಿಗೆ ಮರಳಿಬರುತ್ತಿರುವುದನು ಕಣ್ಣಾರೆ ಕಂಡು ಕೂಡಿಹಾಡುತ್ತಿಹರು ಗೀತವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು