ಯೆರೆಮೀಯ 34:1 - ಕನ್ನಡ ಸತ್ಯವೇದವು C.L. Bible (BSI)1 ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು, ಅವನ ಸಮಸ್ತ ಸೈನ್ಯವು, ಅವನ ಕೈಕೆಳಗಿನ ಭೂರಾಜರೆಲ್ಲರು ಹಾಗೂ ಸಕಲ ಪ್ರಜೆಗಳು ಜೆರುಸಲೇಮಿಗೂ ಅದಕ್ಕೆ ಸೇರಿದ ಎಲ್ಲ ಊರುಗಳಿಗೂ ವಿರುದ್ಧ ಯುದ್ಧಮಾಡುತ್ತಿದ್ದಾಗ ಸರ್ವೇಶ್ವರ ಯೆರೆಮೀಯನಿಗೆ ಈ ವಿಷಯವನ್ನು ತಿಳಿಸಿದರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಣ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇವಿುಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಬಂದಿತು. ಆಗ ನೆಬೂಕದ್ನೆಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ: ಅಧ್ಯಾಯವನ್ನು ನೋಡಿ |