ಯೆರೆಮೀಯ 34:10 - ಕನ್ನಡ ಸತ್ಯವೇದವು C.L. Bible (BSI)10 ತಮ್ಮ ತಮ್ಮ ಹೆಣ್ಣುಗಂಡು ಜೀತದಾರರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಜೀತಮಾಡಿಸಿಕೊಳ್ಳುವುದಿಲ್ಲ ಎಂಬ ಈ ಒಪ್ಪಂದಕ್ಕೆ ಸಮ್ಮತಿಸಿದ್ದ ಎಲ್ಲ ಅಧಿಕಾರಿಗಳೂ ಸಮಸ್ತ ಪ್ರಜೆಗಳೂ ಅದರಂತೆ ನಡೆದು ಜೀತದಾರರನ್ನು ಬಿಡುಗಡೆಮಾಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ತಾವು ತಮ್ಮ ತಮ್ಮ ದಾಸದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ಯೆಹೂದದ ಸಮಸ್ತ ಮುಖಂಡರು ಮತ್ತು ಎಲ್ಲಾ ಜನರು ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿಯೂ ಅವರಿಂದ ಮುಂದೆ ಕೆಲಸ ಮಾಡಿಸುವದಿಲ್ಲ ಎಂಬುದಾಗಿಯೂ ಒಪ್ಪಿಕೊಂಡರು. ಆದ್ದರಿಂದ ಎಲ್ಲಾ ಗುಲಾಮರನ್ನು ಬಿಡುಗಡೆ ಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡರು. ಇನ್ನು ಮುಂದೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಳ್ಳುವುದಿಲ್ಲ ಎಂದು ಅವರು ಒಪ್ಪಿದರು ಮತ್ತು ಅವರನ್ನು ಬಿಡುಗಡೆ ಮಾಡಿದರು. ಅಧ್ಯಾಯವನ್ನು ನೋಡಿ |