Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:11 - ಕನ್ನಡ ಸತ್ಯವೇದವು C.L. Bible (BSI)

11 ಆದರೆ ಕೆಲವು ಕಾಲದ ಮೇಲೆ ತಮ್ಮ ಮನಸ್ಸನ್ನು ಬದಲಾಯಿಸಿಕೊಂಡರು. ಬಿಡುಗಡೆಮಾಡಿದ್ದವರನ್ನು ಮತ್ತೆ ಜೀತದಾರರನ್ನಾಗಿ ಸೇರಿಸಿಕೊಂಡು ಅಧೀನದಲ್ಲಿ ಇಟ್ಟುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಸ್ವಲ್ಪ ಸಮಯವಾದ ಮೇಲೆ ಮನಸ್ಸನ್ನು ಬೇರೆ ಮಾಡಿಕೊಂಡು ತಾವು ಬಿಟ್ಟಿದ್ದವರನ್ನು ಪುನಃ ದಾಸ, ದಾಸಿಯರನ್ನಾಗಿ ಅಧೀನಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ಕೆಲವು ಕಾಲದ ಮೇಲೆ ಮನಸ್ಸನ್ನು ಬೇರೆಮಾಡಿಕೊಂಡು ತಾವು ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ಗುಲಾಮರನ್ನು ಇಟ್ಟುಕೊಂಡಿದ್ದ ಜನರು ತಮ್ಮ ಮನಸ್ಸನ್ನು ಬದಲಾಯಿಸಿ ತಾವು ಬಿಡುಗಡೆ ಮಾಡಿದ ಜನರನ್ನು ಪುನಃ ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ನಂತರ ಅವರು ತಮ್ಮ ಮನಸ್ಸನ್ನು ಬದಲಾಯಿಸಿದರು ಮತ್ತು ಅವರು ಬಿಡುಗಡೆ ಮಾಡಿದ ಗುಲಾಮರನ್ನು ಮರಳಿ ತೆಗೆದುಕೊಂಡು ಅವರನ್ನು ಮತ್ತೆ ಗುಲಾಮರನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:11
25 ತಿಳಿವುಗಳ ಹೋಲಿಕೆ  

ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿ ಬರುವುದು; ಮೂಢನು ತಾನು ಮಾಡಿದ ಮೂರ್ಖತನಕ್ಕೆ ಹಿಂದಿರುಗುವನು.


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”


ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.


ಅಷ್ಟರಲ್ಲಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತ್ತು. ಈ ಸಂಗತಿಯನ್ನು ಕೇಳಿ, ಜೆರುಸಲೇಮನ್ನು ಈಗಾಗಲೆ ಮುತ್ತಿದ್ದ ಬಾಬಿಲೋನಿಯದ ಸೈನಿಕರು ಅದನ್ನು ಬಿಟ್ಟುಹೋಗಿದ್ದರು.


ಜುದೇಯದ ಅರಸ ಚಿದ್ಕೀಯನನ್ನೂ ಅವನ ಮಂತ್ರಿಗಳನ್ನೂ ಅವರ ಶತ್ರುಗಳಿಗೆ ಅಂದರೆ, ಅವರ ಪ್ರಾಣಹತ್ಯಕ್ಕಾಗಿ ಕಾದಿರುವ, ತಕ್ಷಣಕ್ಕೆ ಹಿಂದಿರುಗಿಹೋಗಿರುವ, ಬಾಬಿಲೋನಿಯದ ಅರಸನ ಕೈಗೆ ಕೊಡುವೆನು.


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II


ಆಗ ಸೌಲನು, “ನಾನು ಪಾಪಮಾಡಿದೆ, ದಾವೀದನೇ, ನನ್ನ ಪುತ್ರನೇ, ಹಿಂದಿರುಗಿ ಬಾ; ಈ ದಿನ ನನ್ನ ಜೀವ ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದೆಂದು ಮಾನ್ಯವಾಯಿತು. ಆದುದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವುದಿಲ್ಲ. ಈವರೆಗೆ ನಾನು ಮಾಡಿದ್ದು ಹುಚ್ಚುತನ ಹಾಗೂ ದೊಡ್ಡ ತಪ್ಪು,” ಎಂದು ಹೇಳಿದನು.


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುತ್ತಾನೆಯೇ? ನೀನು ಈ ದಿನ ನನಗೆ ಮಾಡಿದ ಉಪಕಾರಕ್ಕಾಗಿ ಸರ್ವೇಶ್ವರ ನಿನಗೆ ಪ್ರತ್ಯುಪಕಾರಮಾಡಲಿ.


ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲು ಮಳೆ ಇನ್ನು ಸಾಕೇ ಸಾಕು. ಇವುಗಳನ್ನು ನಿಲ್ಲಿಸುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ನಿಮಗೆ ಅಪ್ಪಣೆಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ,” ಎಂದು ಹೇಳಿದನು.


ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.


ತಮ್ಮ ತಮ್ಮ ಹೆಣ್ಣುಗಂಡು ಜೀತದಾರರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಜೀತಮಾಡಿಸಿಕೊಳ್ಳುವುದಿಲ್ಲ ಎಂಬ ಈ ಒಪ್ಪಂದಕ್ಕೆ ಸಮ್ಮತಿಸಿದ್ದ ಎಲ್ಲ ಅಧಿಕಾರಿಗಳೂ ಸಮಸ್ತ ಪ್ರಜೆಗಳೂ ಅದರಂತೆ ನಡೆದು ಜೀತದಾರರನ್ನು ಬಿಡುಗಡೆಮಾಡಿದ್ದರು.


ಹೀಗಿರಲು ಸರ್ವೇಶ್ವರ ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದರು:


ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ಜೀತದಾರರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು