Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:14 - ಕನ್ನಡ ಸತ್ಯವೇದವು C.L. Bible (BSI)

14 ಒಬ್ಬ ಹಿಬ್ರಿಯನು ತನ್ನನ್ನೇ ನಿಮಗೆ ಮಾರಿಕೊಂಡು ಆರು ವರ್ಷ ನಿಮ್ಮ ಜೀತಗಾರನಾಗಿದ್ದರೆ ಅಂಥ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿ ಎಂದು ವಿಧಿಸಿದ್ದೆ. ಆದರೆ ನಿಮ್ಮ ಪೂರ್ವಜರು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತನ್ನನ್ನು ನಿಮಗೆ ಮಾರಿಕೊಂಡು ಆರು ವರುಷ ನಿಮ್ಮ ದಾಸನಾಗಿದ್ದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರುಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿರಿ ಎಂದು ವಿಧಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ; ಆದರೆ ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:14
28 ತಿಳಿವುಗಳ ಹೋಲಿಕೆ  

“ಸ್ವದೇಶದವರಲ್ಲಿ ಯಾವ ಹಿಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ ಮಾರಲ್ಪಟ್ಟಿದ್ದರೆ ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ, ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಟ್ಟುಬಿಡಬೇಕು.


ಆದರೆ ಅವನು ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿ, ಪರಿವಾರದವರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ, ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು.


ಅಯ್ಯೋ, ನಾನೆಂಥ ನಿರ್ಭಾಗ್ಯನು! ಸಾವಿನ ದವಡೆಗೆ ಸಿಕ್ಕಿರುವ ಈ ಶರೀರದಿಂದ ನನ್ನನ್ನು ಬಿಡಿಸುವವರು ಯಾರು?


ಬಡವರನ್ನು ಬೆಳ್ಳಿಗೆ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನೂ ಬಿಡದಂತೆ ಮಾರಿಬಿಡೋಣ,” ಎಂದುಕೊಳ್ಳುತ್ತೀರಿ, ಅಲ್ಲವೆ?


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಬೆಳ್ಳಿಬಂಗಾರಕ್ಕಾಗಿ ಸಜ್ಜನರನ್ನು ಮಾರಿಬಿಡುತ್ತಾರೆ. ಒಂದು ಜೊತೆ ಜೋಡುಗಳ ಸಾಲವನ್ನು ಸಹ ತೀರಿಸಲಾಗದ ಬಡಬಗ್ಗರನ್ನೂ ವಿಕ್ರಯಿಸುತ್ತಾರೆ.


ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ.


“ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನೀನೂ ಮನಸ್ಸು ಮಾಡಿರುವೆಯಾ? ಇವರ ಪಿತೃಗಳ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು -


ಇಸ್ರಯೇಲ್ ವಂಶವೂ ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿದೆ. ಹೌದು, ಇಸ್ರಯೇಲ್ ವಂಶದವರು ತಮ್ಮ ಕೈಕೆಲಸದ ವಿಗ್ರಹಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.


“ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಇದೂ ಸಾಲದೆಂದು ನೀವು ಯೆಹೂದ್ಯರನ್ನೂ ಜೆರುಸಲೇಮನ್ನೂ ಬಲಾತ್ಕರಿಸಿ ದಾಸದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ಅಪರಾಧಗಳನ್ನು ನೀವೂ ಮಾಡಿದ್ದೀರಲ್ಲವೆ?


ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.


“ಏಳು ಸಂವತ್ಸರಗಳು ಕಳೆದನಂತರ ಬಡವರಿಗೆ ಬಿಡುಗಡೆ ಸಿಗಬೇಕು.


ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ.


ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ ನನ್ನ ಮಾತನ್ನು ಕೇಳಿರೆಂದು ತಡಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು