Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:15 - ಕನ್ನಡ ಸತ್ಯವೇದವು C.L. Bible (BSI)

15 ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದಮಾಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ; ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆಮಾಡಿಕೊಂಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸ್ವಲ್ಪಕಾಲದ ಹಿಂದೆ ನೀವು ನೀತಿಯುತವಾದದ್ದನ್ನು ಮಾಡಬೇಕೆಂದು ನಿಮ್ಮ ಮನಸ್ಸನ್ನು ಬದಲಾಯಿಸಿದಿರಿ. ನಿಮ್ಮಲ್ಲಿ ಪ್ರತಿಯೊಬ್ಬರು ನಿಮ್ಮಲ್ಲಿದ್ದ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಿದಿರಿ. ನೀವು ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಂದು ಒಡಂಬಡಿಕೆಯನ್ನು ಸಹ ಮಾಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ, ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:15
15 ತಿಳಿವುಗಳ ಹೋಲಿಕೆ  

ಯೆರೆಮೀಯನಿಗೆ ಸರ್ವೇಶ್ವರನಿಂದ ಮತ್ತೊಂದು ವಾಣಿ ಉಂಟಾಯಿತು. ಇಷ್ಟರೊಳಗೆ ಅರಸ ಚಿದ್ಕೀಯನು ಮತ್ತು ಜೆರುಸಲೇಮಿನ ಜನರೆಲ್ಲರು ಸೇರಿ ಒಂದು ಒಪ್ಪಂದ ಮಾಡಿಕೊಂಡಿದ್ದರು.


ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣ ಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣ ಮಾಡಿದರು.


ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:


‘ಬರಿಯ ಮಾತಿನ ಮನ್ನಣೆಯನ್ನೀಯುತ ಹೃದಯವನು ದೂರವಿರಿಸುತ ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ


ನನ್ನ ಹೆಸರಿನಿಂದ ಪ್ರಖ್ಯಾತವಾಗಿರುವ ದೇವಾಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.


ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೋ ಎಂಬಂತೆ, ಇವರು ದಿನದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.”


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II


ಇವನು ತನ್ನ ತಂದೆ ಯೆಹೋವಾಷನ ಸನ್ಮಾರ್ಗದಲ್ಲಿ ತಪ್ಪದೆ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾದನು. ಆದರೂ ತನ್ನ ಪೂರ್ವಜ ದಾವೀದನಷ್ಟು ಉತ್ತಮನಾಗಿರಲಿಲ್ಲ.


ಯಾಜಕನಾದ ಯೆಹೋಯಾದವನು ಅವನಿಗೆ ಬೋಧಕನಾಗಿದ್ದನು. ಆಗ ಅವನು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.


ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು