Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:16 - ಕನ್ನಡ ಸತ್ಯವೇದವು C.L. Bible (BSI)

16 ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ಜೀತದಾರರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಈಗ ನೀವು ಮನಸ್ಸನ್ನು ಬದಲಾಯಿಸಿದ್ದೀರಿ. ನೀವು ನನ್ನ ಹೆಸರಿಗೆ ಗೌರವ ಕೊಡುವದಿಲ್ಲವೆಂಬುದನ್ನು ತೋರಿಸಿದ್ದೀರಿ. ನೀವು ಇದನ್ನು ಹೇಗೆ ಮಾಡಿದಿರಿ? ನಿಮ್ಮಲ್ಲಿ ಪ್ರತಿಯೊಬ್ಬರು ನೀವು ಬಿಡುಗಡೆ ಮಾಡಿದ ದಾಸದಾಸಿಯರನ್ನು ಹಿಂದಕ್ಕೆ ತೆಗೆದುಕೊಂಡಿರುವಿರಿ. ಅವರು ಪುನಃ ಗುಲಾಮರಾಗುವಂತೆ ಒತ್ತಾಯಿಸಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:16
15 ತಿಳಿವುಗಳ ಹೋಲಿಕೆ  

ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿನ್ನ ದೇವರ ನಾಮಕ್ಕೆ ಅಪಕೀರ್ತಿ ತರಬೇಡ. ನಾನೇ ಸರ್ವೇಶ್ವರ.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ಆದರೆ ಕೆಲವು ಕಾಲದ ಮೇಲೆ ತಮ್ಮ ಮನಸ್ಸನ್ನು ಬದಲಾಯಿಸಿಕೊಂಡರು. ಬಿಡುಗಡೆಮಾಡಿದ್ದವರನ್ನು ಮತ್ತೆ ಜೀತದಾರರನ್ನಾಗಿ ಸೇರಿಸಿಕೊಂಡು ಅಧೀನದಲ್ಲಿ ಇಟ್ಟುಕೊಂಡಿದ್ದರು.


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನೀವಾದರೋ, ‘ಸರ್ವೇಶ್ವರಸ್ವಾಮಿಯ ಪೀಠ ಅಶುದ್ಧ; ಅದರ ಮೇಲಿನ ಆಹಾರಪದಾರ್ಥಗಳು ಅಸಹ್ಯ’ ಎಂದು ಹೇಳಿ ನನ್ನ ನಾಮಕ್ಕೆ ಅಪಕೀರ್ತಿ ತರುತ್ತೀರಿ.


“ನನ್ನ ಬಲಿಪೀಠದ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸಿ ನನ್ನನ್ನು ಅವಮಾನಗೊಳಿಸಿದ್ದೀರಿ;” “ಯಾವ ವಿಷಯದಲ್ಲಿ ನಿಮಗೆ ಅಗೌರವ ತಂದಿದ್ದೇವೆ ಎನ್ನುತ್ತೀರೋ? ‘ಸರ್ವೇಶ್ವರಸ್ವಾಮಿಯ ವೇದಿಕೆಗೆ ಘನತೆ ಏನಿದೆ?’ ಎಂದು ಹೇಳಿಕೊಳ್ಳುವುದರಲ್ಲಿದೆ ಆ ಅಗೌರವ.


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


“ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ.


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು