ಯೆರೆಮೀಯ 34:17 - ಕನ್ನಡ ಸತ್ಯವೇದವು C.L. Bible (BSI)17 ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |