Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 34:2 - ಕನ್ನಡ ಸತ್ಯವೇದವು C.L. Bible (BSI)

2 “ಇಸ್ರಯೇಲರ ದೇವರಾದ ಸರ್ವೇಶ್ವರನಾದ ನನ್ನ ನುಡಿ ಇದು: ನೀನು ಜುದೇಯದ ಅರಸ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆಂದು ಹೇಳು - ‘ಸರ್ವೇಶ್ವರನ ಮಾತನ್ನು ಆಲಿಸು: ಇಗೋ, ನಾನು ಈ ನಗರವನ್ನು ಬಾಬಿಲೋನಿನ ಅರಸನ ಕೈವಶಮಾಡುವೆನು. ಅವನು ಇದನ್ನು ಬೆಂಕಿಯಿಂದ ಸುಟ್ಟುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು - ಯೆಹೋವನ ಮಾತನ್ನು ಆಲಿಸು - ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಈ ಸಂದೇಶವನ್ನು ತಿಳಿಸು. ‘ಚಿದ್ಕೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಬ್ರದಲ್ಲಿ ನಾನು ಜೆರುಸಲೇಮ್ ನಗರವನ್ನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನ್ನು ಸುಟ್ಟುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 34:2
14 ತಿಳಿವುಗಳ ಹೋಲಿಕೆ  

ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’


ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.


ಜುದೇಯದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಸರ್ವೇಶ್ವರನೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ಆಕ್ರಮಿಸುವನು.


ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.


ತಮ್ಮ ಎಲ್ಲ ಮಡದಿಯರನ್ನೂ ಮಕ್ಕಳನ್ನೂ ಬಾಬಿಲೋನಿಯರ ಬಳಿಗೆ ತರಲಾಗುವುದು. ತಾವು ತಪ್ಪಿಸಿಕೊಳ್ಳಲಾಗದೆ ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಕೊಳ್ಳುವಿರಿ. ಈ ನಗರವು ತಮ್ಮ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು,” ಎಂದು ಹೇಳಿದನು.


ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.


ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು‍ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು.


“ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವ ತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು