ಯೆರೆಮೀಯ 34:20 - ಕನ್ನಡ ಸತ್ಯವೇದವು C.L. Bible (BSI)20 ಇವರೆಲ್ಲರನ್ನು ಶತ್ರುಗಳ ವಶಕ್ಕೆ ಒಪ್ಪಿಸುವೆನು. ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು. ಇವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆದ್ದರಿಂದ ನಾನು ಆ ಜನರನ್ನು ಅವರ ವೈರಿಗಳಿಗೆ ಮತ್ತು ಅವರನ್ನು ಕೊಲ್ಲಲು ಇಚ್ಛಿಸುವ ಪ್ರತಿಯೊಬ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು. ಅಧ್ಯಾಯವನ್ನು ನೋಡಿ |