ಯೆರೆಮೀಯ 34:3 - ಕನ್ನಡ ಸತ್ಯವೇದವು C.L. Bible (BSI)3 ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಂಧಿತನಾಗಿ ಅವನ ವಶವಾಗುವೆ. ಬಾಬಿಲೋನಿನ ಅರಸನ ಸಮಕ್ಷಮದಲ್ಲಿ ನಿಲ್ಲುವೆ. ಅವನು ನಿನ್ನೊಡನೆ ಮುಖಾಮುಖಿಯಾಗಿ ಮಾತಾಡುವನು. ನೀನು ಬಾಬಿಲೋನಿಗೆ ಗಡಿಪಾರಾಗುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತಾಡುವನು; ನೀನು ಬಾಬೆಲಿಗೆ ಗಡೀಪಾರಾಗುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಚಿದ್ಕೀಯನೇ, ನೀನು ಬಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನ್ನನ್ನು ಹಿಡಿದು ಅವನಿಗೆ ಒಪ್ಪಿಸಲಾಗುವುದು. ಬಾಬಿಲೋನಿನ ರಾಜನನ್ನು ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನ್ನೊಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಹೋಗುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ. ಅಧ್ಯಾಯವನ್ನು ನೋಡಿ |