“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.
‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.
ಸೌಲನ ಮಗನಿಗೆ ಬಾಣ ಹಾಗು ರೇಕಾಬ್ ಎಂಬ ಇಬ್ಬರು ಸೇನಾಪತಿಗಳಿದ್ದರು. ಇವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. (ಈ ಬೇರೋತ್ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ;
ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ : “ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ತಿದ್ದುಕೊಳ್ಳಿ. ಹಾಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.