Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:17 - ಕನ್ನಡ ಸತ್ಯವೇದವು C.L. Bible (BSI)

17 ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಗೋ, ನಾನು ಯೆಹೂದ್ಯರಿಗೂ ಯೆರೂಸಲೇವಿುನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಆ ಎಲ್ಲಾ ಕೇಡುಗಳು ಬೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಆ ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನ್ನು ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:17
28 ತಿಳಿವುಗಳ ಹೋಲಿಕೆ  

ಆದುದರಿಂದ ಅವರಿಗೆ ಆಪತ್ತು ಬಂದೊದಗುವಂತೆ ಮಾಡುವೆನು. ಅವರು ಅಂಜುತ್ತಿದ್ದ ವಿಪತ್ತುಗಳನ್ನೇ ಅವರ ಮೇಲೆ ಬರಮಾಡುವೆನು. ಏಕೆಂದರೆ, ನಾನು ಕೂಗಿದಾಗ ಯಾರೂ ಉತ್ತರಿಸಲಿಲ್ಲ, ನಾನು ಹೇಳಿದಾಗ ಅವರು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು, ನನಗೆ ಇಷ್ಟವಲ್ಲದ್ದನ್ನೇ ಆಯ್ಕೆಮಾಡಿಕೊಂಡರು.”


ಆದರೆ ಇಸ್ರಯೇಲರನ್ನು ಕುರಿತು: “ಅವಿಧೇಯರೂ ಪ್ರತಿಭಟಿಸುವವರೂ ಆದ ಈ ಜನಾಂಗವನ್ನು ದಿನವೆಲ್ಲಾ ನಾನು ಕೈಚಾಚಿ ಕರೆದೆ,” ಎಂದು ಪ್ರವಾದಿಸಿದ್ದಾನೆ.


ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ.


ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.


ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಆದರೆ ಅವನ ಅಂತರಂಗವನ್ನು ವೀಕ್ಷಿಸುವಂಥವನು ಸರ್ವೇಶ್ವರ.


ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.


ಅವರು ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದಾರೆ. ನಾನು ಅವರಿಗೆ ಎಡೆಬಿಡದೆ ಬೋಧಿಸುತ್ತಾ ಬಂದರೂ ನನ್ನ ಉಪದೇಶವನ್ನು ಅಂಗೀಕರಿಸಲಿಲ್ಲ, ನನಗೆ ಕಿವಿಗೊಡಲೂ ಇಲ್ಲ.


ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆಹೋದರೆ,


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನು ತನ್ನ ದುಷ್ಟ ಹೃದಯದ ನಿಮಿತ್ತ ಹಟಮಾರಿಯಂತೆ ನಡೆದುಕೊಂಡನು. ಆದಕಾರಣ, ಕೈಗೊಳ್ಳಬೇಕೆಂದು ನಾನು ಆಜ್ಞಾಪಿಸಿದ್ದರೂ ಅವರು ಕೈಗೊಳ್ಳದೆಹೋದ ಆ ಒಡಂಬಡಿಕೆಯಲ್ಲೆ ಸೂಚಿಸಲಾಗಿರುವ ಶಾಪಗಳನ್ನೆಲ್ಲ ಅವರ ಮೇಲೆ ಬರಮಾಡಿದೆ.”


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ದೇವವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ನಿಷ್ಠೆಯಿಂದ ಪಾಲಿಸುವವನು ಫಲಪಡೆಯುವನು.


ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.


‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.


“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.


ಅರಸನನ್ನೂ ಅವನ ಸಂತತಿ ಹಾಗೂ ಸೇವಕರನ್ನೂ ಅವರು ಮಾಡಿದ ಅಧರ್ಮಕ್ಕಾಗಿ ದಂಡಿಸುವೆನು. ನಾನು ಇವರನ್ನು, ಜೆರುಸಲೇಮಿನವರನ್ನು ಹಾಗೂ ಯೆಹೂದ್ಯರನ್ನು ‘ನಿಮಗೆ ದೊಡ್ಡ ಕೇಡಾಗಲಿದೆ’ ಎಂದು ಎಚ್ಚರಿಸಿದರೂ ಅವರು ಕೇಳಲಿಲ್ಲ. ಆದ್ದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’.”


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು