Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:19 - ಕನ್ನಡ ಸತ್ಯವೇದವು C.L. Bible (BSI)

19 ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು’ ಎಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ’” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನು ‘ರೇಕಾಬನ ಮಗನಾದ ಯೋನಾದಾಬನ ಸಂತಾನದವರು ಯಾವಾಗಲೂ ನನ್ನ ಸೇವೆಯಲ್ಲಿರುವರು’ ಎಂದು ನುಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆ ಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು, ಇಸ್ರಾಯೇಲರ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಇದನ್ನು ನುಡಿದಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:19
8 ತಿಳಿವುಗಳ ಹೋಲಿಕೆ  

ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ನಿಲ್ಲಲಾರರು ನಿನ್ನ ಮುಂದೆ ಗರ್ವಿಗಳು I ನಿನಗೆ ವೈರಿಗಳಾಗುವರು ಅಧರ್ಮಿಗಳು II


ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ನಕಲು ಮಾಡುವುದರಲ್ಲಿ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು, ಸುಕಾತ್ಯರು ಯಾಬೇಚಿನಲ್ಲಿ ವಾಸಿಸಿದ್ದರು. ರೇಕಾಬ್ಬರೊಂದಿಗೆ ಅಂತರ್ ವಿವಾಹ ಮಾಡಿಕೊಂಡ ಕೇನ್ಯರು ಇವರೇ.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ನಾನಂತು ಮಿಚ್ಪದಲ್ಲಿ ವಾಸವಾಗಿರುವೆನು. ನಮ್ಮ ಬಳಿಗೆ ಬರುವ ಬಾಬಿಲೋನಿಯರ ಮುಂದೆ ನಿಮ್ಮ ಪ್ರತಿನಿಧಿಯಾಗಿರುವೆನು. ನೀವು ಹೋಗಿ ದ್ರಾಕ್ಷಾರಸ, ಹಣ್ಣು, ಎಣ್ಣೆ ಮುಂತಾದವುಗಳನ್ನು ಸಂಗ್ರಹಿಸಿ ನಿಮ್ಮ ಉಗ್ರಾಣಗಳಲ್ಲಿ ತುಂಬಿಸಿಡಿ. ನೀವು ಹಿಡಿದಿರುವ ಪಟ್ಟಣಗಳಲ್ಲೆ ವಾಸವಾಗಿರಿ,” ಎಂದು ಶಪಥಮಾಡಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು