Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:1 - ಕನ್ನಡ ಸತ್ಯವೇದವು C.L. Bible (BSI)

1 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಕೇಳಿ ಬಂದ ಸರ್ವೇಶ್ವರನ ವಾಣಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಷೀಯನ ಮಗನಾದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಯೆಹೋವನ ಸಂದೇಶ ಹೀಗಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಈ ವಾಕ್ಯವು ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:1
9 ತಿಳಿವುಗಳ ಹೋಲಿಕೆ  

ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೇ ವರ್ಷದಲ್ಲಿ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದನು. ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಜ್ಞೆಯ ಪ್ರಕಾರ ಈ ವಾಕ್ಯವನ್ನು ಬಾರೂಕನಿಗೆ ನುಡಿದನು.


ಯೋಷೀಯನ ಮಗನಾದ ಜುದೇಯದ ಅರಸ ಯೆಹೋಯಾಕೀಮನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು:


ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು.


“ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಬತ್ತನೆಯ ಒಂಬತ್ತನೆಯ ತಿಂಗಳಲ್ಲಿ ಜೆರುಸಲೇಮಿನವರೆಲ್ಲರು ಹಾಗು ಜುದೇಯದ ಊರುಗಳಿಂದ ಜೆರುಸಲೇಮಿಗೆ ಬಂದಿದ್ದವರೆಲ್ಲರು ಸರ್ವೇಶ್ವರನ ಸಮ್ಮುಖದಲ್ಲಿ ಉಪವಾಸವ್ರತವನ್ನು ಗೊತ್ತುಮಾಡಿ ಪ್ರಕಟಿಸಿದ್ದರು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಆ ಸೈನ್ಯದ ಮೇಲೆ ದಾಳಿಮಾಡಿದ ವಿಷಯ:


ಜುದೇಯದ ಅರಸ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದು ಮುತ್ತಿಗೆ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು