Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:18 - ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಬಾರೂಕನು ಅವರಿಗೆ, “ಈ ಮಾತುಗಳೆಲ್ಲ ಯೆರೆಮೀಯನ ಬಾಯಿಂದಲೇ ಬಂದವುಗಳು. ಅವನು ನುಡಿದ ಹಾಗೆ ನಾನು ಅವುಗಳನ್ನು ಶಾಯಿಯಿಂದ ಈ ಸುರುಳಿಯಲ್ಲಿ ಬರೆದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಾರೂಕನು ಅವರಿಗೆ, “ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಸಿಯಿಂದ ಈ ಪುಸ್ತಕದಲ್ಲಿ ಬರೆದೆನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಶಿಯಿಂದ ಈ ಪುಸ್ತಕದಲ್ಲಿ ಬರೆದೆನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಹೌದು, ಯೆರೆಮೀಯನು ಬಾಯಿಂದ ಹೇಳಿದನು ಮತ್ತು ನಾನು ಆ ಸಂದೇಶಗಳನ್ನೆಲ್ಲಾ ಶಾಹಿಯಿಂದ ಸುರುಳಿಯ ಮೇಲೆ ಬರೆದೆನು” ಎಂದು ಬಾರೂಕನು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಬಾರೂಕನು ಅವರಿಗೆ, “ಅವನು ಈ ವಾಕ್ಯಗಳನ್ನೆಲ್ಲಾ ನನಗೆ ಹೇಳಿಕೊಟ್ಟನು. ನಾನು ಅವುಗಳನ್ನು ಮಸಿಯಿಂದ ಸುರುಳಿಯಲ್ಲಿ ಬರೆದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:18
7 ತಿಳಿವುಗಳ ಹೋಲಿಕೆ  

ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆಯಿಸಿ ಸರ್ವೇಶ್ವರನ ಮಾತುಗಳನ್ನೆಲ್ಲ ಹೇಳಿದನು. ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.


“ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ.


ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಸುರುಳಿಯನ್ನು ಅರಸನು ಸುಟ್ಟುಹಾಕಿದ ಮೇಲೆ ಯೆರೆಮೀಯನಿಗೆ ಸರ್ವೇಶ್ವರನಿಂದ ಈ ವಾಣಿ ಕೇಳಿಬಂದಿತು:


ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲೇಖಕ ಬಾರೂಕನಿಗೆ ಕೊಟ್ಟನು. ಅವನು ಅದರಲ್ಲಿ ಜುದೇಯದ ಅರಸ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲ ಮಾತುಗಳನ್ನು ಬರೆದನು. ಅದು ಮಾತ್ರವಲ್ಲ, ಅಂಥ ಅನೇಕ ಮಾತುಗಳನ್ನೂ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದನು. ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಜ್ಞೆಯ ಪ್ರಕಾರ ಈ ವಾಕ್ಯವನ್ನು ಬಾರೂಕನಿಗೆ ನುಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು