Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:19 - ಕನ್ನಡ ಸತ್ಯವೇದವು C.L. Bible (BSI)

19 ಆಗ ರಾಜ್ಯಾಧಿಕಾರಿಗಳು ಬಾರೂಕನಿಗೆ, ನೀನೂ ಯೆರೆಮೀಯನೂ ಹೊರಟುಹೋಗಿ ಅವಿತುಕೊಳ್ಳಬೇಕು. ನೀವು ಇಲ್ಲಿದ್ದೀರೆಂದು ಯಾರಿಗೂ ಗೊತ್ತಾಗಬಾರದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಪ್ರಧಾನರು ಬಾರೂಕನಿಗೆ - ಹೊರಡು, ನೀನೂ ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬದು ಯಾರಿಗೂ ಗೊತ್ತಾಗಬಾರದು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ರಾಜಾಧಿಕಾರಿಗಳು ಬಾರೂಕನಿಗೆ, “ನೀನು ಮತ್ತು ಯೆರೆಮೀಯನು ಹೋಗಿ ಎಲ್ಲಿಯಾದರೂ ಅಡಗಿಕೊಳ್ಳಿರಿ. ಎಲ್ಲಿ ಅಡಗಿಕೊಂಡಿದ್ದೀರೆಂಬುದನ್ನು ಯಾರಿಗೂ ತಿಳಿಸಬೇಡಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಪ್ರಧಾನರು ಬಾರೂಕನಿಗೆ, “ನೀನೂ, ಯೆರೆಮೀಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:19
12 ತಿಳಿವುಗಳ ಹೋಲಿಕೆ  

ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.


ತಮ್ಮ ದೇವರಾದ ಸರ್ವೇಶ್ವರನಾಣೆ, ನನ್ನ ಒಡೆಯ ಸೇವಕರನ್ನು ಅಟ್ಟಿ ನಿಮ್ಮನ್ನು ಹುಡುಕದ ಜನಾಂಗವಾಗಲಿ, ರಾಜ್ಯವಾಗಲಿ ಒಂದೂ ಇಲ್ಲ. ಆ ಜನಾಂಗ, ರಾಜ್ಯಗಳವರು, ‘ಎಲೀಯನು ನಮ್ಮಲ್ಲಿರುವುದಿಲ್ಲ,’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು.


ಅದೇ ಸಮಯಕ್ಕೆ ಸರಿಯಾಗಿ ಕೆಲವು ಮಂದಿ ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, “ಇಲ್ಲಿಂದ ಹೊರಟು ಹೋಗಿಬಿಡಿ, ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿದ್ದಾನೆ,” ಎಂದರು.


ಆ ಬಳಿಕ ಅಮಚ್ಯನು ಆಮೋಸನಿಗೆ, “ಕಣಿಹೇಳುವವನೇ, ತೊಲಗು, ಜುದೇಯ ನಾಡಿಗೆ ಓಡಿಹೋಗು; ಅಲ್ಲಿ ಪ್ರವಾದನೆಮಾಡಿ ಹೊಟ್ಟೆ ಹೊರೆದುಕೊ.


ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.


ಆಗ ಸರ್ವೇಶ್ವರ ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಹೇಳಿಸಿದರು.


ಇದನ್ನು ಕೇಳಿದ ನಾಯಕರು ಮತ್ತು ಸಕಲ ಜನರು ಯಾಜಕ - ಪ್ರವಾದಿಗಳಿಗೆ, “ಇವನು ಮರಣದಂಡನೆಗೆ ಪಾತ್ರನಲ್ಲ. ಏಕೆಂದರೆ ನಮ್ಮ ದೇವರಾದ ಸರ್ವೇಶ್ವರನ ಹೆಸರಿನಲ್ಲೇ ಇದನ್ನು ನಮಗೆ ನುಡಿದಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು