ಯೆರೆಮೀಯ 36:21 - ಕನ್ನಡ ಸತ್ಯವೇದವು C.L. Bible (BSI)21 ಅವನು ಲೇಖಕ ಎಲೀಷಾಮನ ಕೊಠಡಿಯಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಎಲ್ಲ ರಾಜ್ಯಾಧಿಕಾರಿಗಳ ಮುಂದೆ ಓದಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕೂಡಲೇ ಅರಸನು ಸುರಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ರಾಜನಾದ ಯೆಹೋಯಾಕೀಮನು ಆ ಸುರುಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು. ಯೆಹೂದಿಯು ಧರ್ಮಶಾಸ್ತ್ರಜ್ಞನಾದ ಎಲೀಷಾಮನ ಕೋಣೆಯಿಂದ ಆ ಸುರುಳಿಯನ್ನು ತಂದನು. ಬಳಿಕ ರಾಜನು ಮತ್ತು ಅವನ ಸುತ್ತಲು ನಿಂತ ಅಧಿಕಾರಿಗಳೆಲ್ಲ ಕೇಳುವಂತೆ ಯೆಹೂದಿಯು ಆ ಸುರಳಿಯನ್ನು ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೀಗೆ ಅರಸನು ಯೆಹೂದಿಯನ್ನು, ಆ ಸುರುಳಿಯನ್ನು ತೆಗೆದುಕೊಂಡು ಬರುವ ಹಾಗೆ ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು. ಯೆಹೂದಿಯು ಅದನ್ನು ಅರಸನಿಗೂ, ಅರಸನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನರಿಗೂ ಓದಿ ಹೇಳಿದನು. ಅಧ್ಯಾಯವನ್ನು ನೋಡಿ |