Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:24 - ಕನ್ನಡ ಸತ್ಯವೇದವು C.L. Bible (BSI)

24 ಅರಸನೇ ಆಗಲಿ, ಅವನ ಸೇವಕರಲ್ಲಿ ಯಾರೇ ಆಗಲಿ, ಸುರುಳಿಯ ಮಾತುಗಳನ್ನೆಲ್ಲಾ ಕೇಳಿಯೂ ಭಯಪಡಲಿಲ್ಲ. ದುಃಖಸೂಚನೆಗಾಗಿ ತಮ್ಮ ಬಟ್ಟೆಯನ್ನು ಹರಿದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅರಸನಾಗಲಿ ಸುರಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:24
20 ತಿಳಿವುಗಳ ಹೋಲಿಕೆ  

ಆ ಎಲ್ಲ ಮಾತುಗಳನ್ನು ಅವರು ಕೇಳಿ ತಳಮಳಗೊಂಡು ಒಬ್ಬರನ್ನೊಬ್ಬರು ನೋಡಿದರು. “ನಾವು ಈ ಮಾತುಗಳನ್ನೆಲ್ಲ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.


ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II


ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು.


ಬಳಿಕ, ಹಿಲ್ಕೀಯನ ಮಗನೂ ರಾಜ ಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ಅರಸ ಹಿಜ್ಕೀಯನ ಬಳಿಗೆ ಬಂದು, ಅವನಿಗೆ ಆ ಸೇನಾಪತಿಯ ಮಾತುಗಳನ್ನು ತಿಳಿಸಿದರು.


ಕೆಟ್ಟದನು ಮಾಡಲು ಮನದಟ್ಟುಮಾಡಿಕೊಂಡಿಹರು I “ಗುಟ್ಟಾಗಿಡೋಣ ಉರುಲು, ಕಾಂಬರಾರು?” ಎನ್ನುತಿಹರು? II


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.


ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ನೀನಾದರೋ ದೇವರ ಭಯಭಕ್ತಿಯನ್ನು ಕೆಡಿಸುತ್ತಿರುವೆ ದೇವರ ಧ್ಯಾನಕ್ಕೆ ಅಡ್ಡಿಬರುತ್ತಿರುವೆ.


ರೂಬೇನನು ಮರಳಿ ಆ ಬಾವಿಯ ಬಳಿಗೆ ಬಂದು ನೋಡಿದನು. ಅದರಲ್ಲಿ ಜೋಸೆಫನು ಇರಲಿಲ್ಲ.


ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.


ಸೌಲನು, ಅವನ ಮಗ ಯೋನಾತಾನನು ಹಾಗೂ ಸರ್ವೇಶ್ವರನ ಪ್ರಜೆಗಳಾದ ಇಸ್ರಯೇಲರು ಕತ್ತಿಯಿಂದ ಮೃತರಾದದ್ದಕ್ಕಾಗಿ


ಈ ವರದಿಯನ್ನು ಕೇಳಿದ ಹಿಜ್ಕೀಯನು ಕೂಡ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು, ಸರ್ವೇಶ್ವರ ಸ್ವಾಮಿಯ ಆಲಯಕ್ಕೆ ಹೋದನು.


ಈ ಸೂಚಕಕಾರ್ಯವನ್ನು ಕೂಡ ಗಣನೆಗೆ ತೆಗೆದುಕೊಳ್ಳದೆ ಫರೋಹನು ತನ್ನ ಅರಮನೆಗೆ ಹಿಂದಿರುಗಿದನು.


“ಬೈಲಿಗೆ ಬಾರದು ನಿನ್ನ ದೋಷವು, ನಿನಗದು ಕೇಡು ತರದು” I ಇಂತುಲಿದು ಆ ಪಾಪದ ಜಿನುಗು ಅವನನು ವಂಚಿಸುತಿಹುದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು