Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:29 - ಕನ್ನಡ ಸತ್ಯವೇದವು C.L. Bible (BSI)

29 ಅದೂ ಅಲ್ಲದೆ ಜುದೇಯದ ಅರಸ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು: ‘ಸರ್ವೇಶ್ವರ ಹೀಗೆಂದಿದ್ದಾರೆ - ಬಾಬಿಲೋನಿನ ಅರಸನು ಬಂದು ಈ ನಾಡನ್ನು ಜನ ಅಥವಾ ಜಾನುವಾರುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಈ ಸುರುಳಿಯಲ್ಲಿ ಬರೆಸಿದ್ದು ಏಕೆ ಎಂದು ಪ್ರಶ್ನಿಸಿ, ಆಕ್ಷೇಪಿಸಿ ಅದನ್ನು ನೀನು ಸುಟ್ಟುಬಿಟ್ಟಿಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು - ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನು ಬಂದು ಈ ದೇಶವನ್ನು ಜನಪಶುಗಳಿಲ್ಲದಂತೆ ಹಾಳುಮಾಡುವದು ಖಂಡಿತ ಎಂದು ಈ ಸುರಳಿಯನ್ನು ಬರೆಯಿಸಿದ್ದೇಕೆ ಎಂಬದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:29
21 ತಿಳಿವುಗಳ ಹೋಲಿಕೆ  

“ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು.


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


ಜುದೇಯದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಸರ್ವೇಶ್ವರನೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ಆಕ್ರಮಿಸುವನು.


ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ಸಂಕಟ - ಪೇಚಾಟ ಅವನನ್ನು ಕಾಡುತ್ತಿರುತ್ತವೆ ಯುದ್ಧಸನ್ನದ್ಧ ರಾಜರಂತೆ ಅವನಿಗೆ ಸೋಲನು ತರುತ್ತವೆ.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.


“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


ನನಗೂ ನಿನಗೂ ಹಿಂದೆ, ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ಆಪತ್ತು-ವಿಪತ್ತು, ಕಾಯಿಲೆ-ಕಷ್ಟ, ಇಂಥವುಗಳನ್ನು ಸಾರುತ್ತಿದ್ದರು.


ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


ದೇವರಿಗೆ ವಿರುದ್ಧ ಅವನು ಮುಷ್ಠಿ ತೋರಿದನಲ್ಲವೆ? ಸರ್ವಶಕ್ತನನು ಧಿಕ್ಕರಿಸುತಾ ಶೂರನಂತೆ ಮೆರೆದನಲ್ಲವೆ?


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ನಾನು ಈ ನಾಡಿನ ವಿಷಯದಲ್ಲಿ ನುಡಿದುದೆಲ್ಲವನ್ನು, ಅಂದರೆ ಯೆರೆಮೀಯನ ಮುಖಾಂತರ ಸಕಲ ರಾಷ್ಟ್ರಗಳ ವಿರುದ್ಧ ನುಡಿದಿರುವ ಹಾಗು ಪ್ರವಾದನೆಗಳ ಗ್ರಂಥದಲ್ಲಿ ಬರೆದುದೆಲ್ಲವನ್ನು ಅದರ ಮೇಲೆ ಬರಮಾಡುವೆನು.


ಸರ್ವಶಕ್ತ ಸರ್ವೇಶ್ವರನ ಮಾತುಗಳಿವು: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಹಾಳುಬಿದ್ದಿರುವ ಈ ಪ್ರಾಂತ್ಯ ಹಾಗು ಇಲ್ಲಿನ ಊರುಕೇರಿಗಳು ಮತ್ತೆ ಕುರುಬರು ತಮ್ಮ ಹಿಂಡುಗಳನ್ನು ಇಲ್ಲಿ ತಂಗಿಸಲು ಆಸರೆಯಾಗುವುವು.


ಯೆಹೂದಿ ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಚೂರಿಯಿಂದ ಕತ್ತರಿಸಿ ಸುರುಳಿ ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು