Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:3 - ಕನ್ನಡ ಸತ್ಯವೇದವು C.L. Bible (BSI)

3 ಬಹುಶಃ, ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನಾದರು ಕೇಳಿ ತಮ್ಮ ದುರ್ಮಾರ್ಗಗಳನ್ನು ಬಿಟ್ಟು ಹಿಂದಿರುಗಬಹುದು. ಹಿಂದಿರುಗಿದರೆ, ಅವರ ಪಾಪಾಪರಾಧಗಳನ್ನು ಕ್ಷಮಿಸಿಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಿಂದಿರುಗಿದರೆ ಅವರ ಪಾಪಾಪರಾಧಗಳನ್ನು ಕ್ಷವಿುಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಮಾಡಬೇಕೆಂದು ಯೋಚಿಸಿರುವುದನ್ನು ಯೆಹೂದ ಕುಲದವರು ಕೇಳಿಸಿಕೊಳ್ಳಬಹುದು. ಅವರು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬಹುದು. ಅವರು ಹಾಗೆ ಮಾಡಿದರೆ ಅವರು ಮಾಡಿದ ಪಾಪಗಳನ್ನು ನಾನು ಕ್ಷಮಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:3
35 ತಿಳಿವುಗಳ ಹೋಲಿಕೆ  

ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.


ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು.


ನಿಮ್ಮ ಮಕ್ಕಳು ಸಹಿತವಾಗಿ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯಕ್ಕೆ ಮರಳಿಬಂದು ನಾನು ಈಗ ನಿಮಗೆ ಬೋಧಿಸುವ ಅವರ ಮಾತುಗಳಿಗೆ ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ವಿಧೇಯರಾಗಬೇಕು;


ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.


ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರು; ಪಾಪಕ್ಷಮೆ ಹೊಂದಿಯಾರು’,” ಎಂದರು.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.


ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ನೀವಾದರೋ ಸರ್ವೇಶ್ವರನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳಂತೆ ನಡೆಯುವಿರಿ;


ಇವರ ಹೃದಯ ಕಲ್ಲಾಗಿದೆ, ಕಿವಿ ಮಂದವಾಗಿದೆ, ಕಣ್ಣು ಮಬ್ಬಾಗಿದೆ. ಇಲ್ಲದಿರೆ ಇವರ ಕಣ್ಣು ಕಾಣುತ್ತಾ, ಕಿವಿ ಕೇಳುತ್ತಾ, ಹೃದಯ ಗ್ರಹಿಸುತ್ತಾ, ನನ್ನತ್ತ ತಿರುಗುತ್ತಿದ್ದರು. ದೇವರಾದ ನಾನಿವರನ್ನು ಸ್ವಸ್ಥಪಡಿಸುತ್ತಿದ್ದೆ.’


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಕಡೆಗೆ ತೋಟದ ಯಜಮಾನನು, ‘ಏನುಮಾಡಲಿ? ನನ್ನ ಮುದ್ದುಮಗನನ್ನೇ ಕಳುಹಿಸುತ್ತೇನೆ; ಬಹುಶಃ ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡ.


ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.


ಕೇಡಿದೆಯೇ ನೋಡು ನನ್ನ ಮಾರ್ಗದಲಿ I ನಡೆಸೆನ್ನನು ಆ ಸನಾತನ ಪಥದಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು