ಯೆರೆಮೀಯ 36:30 - ಕನ್ನಡ ಸತ್ಯವೇದವು C.L. Bible (BSI)30 ಈ ಕಾರಣ ಜುದೇಯದ ಅರಸ ಯೆಹೋಯಾಕೀಮನು ಆದ ನಿನ್ನ ವಿರುದ್ಧ ಸರ್ವೇಶ್ವರ ಹೀಗೆನ್ನುತ್ತಾರೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು. ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ಇರುಳಿನ ಚಳಿಗೂ ಈಡಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ರಾತ್ರಿಯ ಚಳಿಗೂ ಈಡಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನ್ನು ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆದ್ದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವವನು ಅವನಿಗೆ ಇರುವುದಿಲ್ಲ. ಅವನ ಹೆಣವು ಹಗಲಿನಲ್ಲಿ ಬಿಸಿಲಿಗೂ, ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲಾಗುವುದು. ಅಧ್ಯಾಯವನ್ನು ನೋಡಿ |