Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:6 - ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಈ ಸುರುಳಿಯಲ್ಲಿ ಬರೆದಿರುವ ಸರ್ವೇಶ್ವರನ ವಾಕ್ಯಗಳನ್ನು, ಉಪವಾಸದಿನದಂದು, ಸರ್ವೇಶ್ವರನ ಆಲಯದೊಳಗೆ ಕೂಡಿರುವ ಜನರಿಗೂ ಆಯಾಯ ಊರುಗಳಿಂದ ಬಂದಿರುವ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ಓದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ [ಯೆರೂಸಲೇವಿುನ] ಜನರಿಗೂ ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನೀನು ಯೆಹೋವನ ಆಲಯಕ್ಕೆ ಉಪವಾಸದ ದಿನ ಹೋಗು ಮತ್ತು ಸುರುಳಿಯಲ್ಲಿ ಬರೆದದ್ದನ್ನು ಜನರ ಮುಂದೆ ಓದು. ನಾನು ಹೇಳುತ್ತಿದ್ದಂತೆಯೇ ನೀನು ಸುರುಳಿಯ ಮೇಲೆ ಬರೆದುಕೊಂಡ ಯೆಹೋವನ ಸಂದೇಶಗಳನ್ನು ಆ ಜನರ ಮುಂದೆ ಓದು. ತಾವು ವಾಸಮಾಡುವ ಸ್ಥಳಗಳಿಂದ ಜೆರುಸಲೇಮಿಗೆ ಬಂದಿರುವ ಎಲ್ಲಾ ಯೆಹೂದ್ಯರ ಮುಂದೆ ಆ ಸಂದೇಶಗಳನ್ನು ಓದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ, ನೀನು ಬರೆದು ಸುರುಳಿಯಲ್ಲಿ ಯೆಹೋವ ದೇವರ ಆಲಯದೊಳಗೆ ಉಪವಾಸದ ದಿವಸದಲ್ಲಿ ಯೆಹೋವ ದೇವರ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:6
13 ತಿಳಿವುಗಳ ಹೋಲಿಕೆ  

“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


‘ದಾವೀದನ ಸಿಂಹಾಸನಾರೂಢನಾದ ಜುದೇಯದ ಅರಸನೇ, ಸರ್ವೇಶ್ವರನ ಮಾತನ್ನು ಕೇಳು; ನಿನ್ನ ಪರಿವಾರದವರೂ ಈ ಬಾಗಿಲುಗಳಲ್ಲಿ ಪ್ರವೇಶಿಸುವ ನಿನ್ನ ಪ್ರಜೆಗಳೂ ಕೇಳಲಿ;


“ನೀನು ನನ್ನ ಆಲಯದ ಬಾಗಿಲಲ್ಲಿ ನಿಂತು ಈ ವಾಕ್ಯವನ್ನು ಸಾರು - ‘ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳಲು ಈ ದ್ವಾರಗಳನ್ನು ಪ್ರವೇಶಿಸುವ ಎಲ್ಲ ಯೆಹೂದ್ಯರೇ, ಸರ್ವೇಶ್ವರನ ನುಡಿಯನ್ನು ಕೇಳಿ;


ಇಷ್ಟರಲ್ಲಿ ಬಹಳ ದಿನಗಳು ಕಳೆದಿದ್ದವು. ಉಪವಾಸದ ಮಹಾದಿನವೂ ಕಳೆದಿತ್ತು. ಈ ಕಾಲದಲ್ಲಿ ಸಮುದ್ರದಲ್ಲಿ ಮುಂದುವರಿಸುವುದು ಅಪಾಯಕರವಾಗಿತ್ತು.


ಯೆರೆಮೀಯನು ಸರ್ವೇಶ್ವರ ಸ್ವಾಮಿಯ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಬಳಿಕ ಅಲ್ಲಿಂದ ಬಂದು ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು:


ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


“ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ.


ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆಯಿಸಿ ಸರ್ವೇಶ್ವರನ ಮಾತುಗಳನ್ನೆಲ್ಲ ಹೇಳಿದನು. ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು