Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:9 - ಕನ್ನಡ ಸತ್ಯವೇದವು C.L. Bible (BSI)

9 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಬತ್ತನೆಯ ಒಂಬತ್ತನೆಯ ತಿಂಗಳಲ್ಲಿ ಜೆರುಸಲೇಮಿನವರೆಲ್ಲರು ಹಾಗು ಜುದೇಯದ ಊರುಗಳಿಂದ ಜೆರುಸಲೇಮಿಗೆ ಬಂದಿದ್ದವರೆಲ್ಲರು ಸರ್ವೇಶ್ವರನ ಸಮ್ಮುಖದಲ್ಲಿ ಉಪವಾಸವ್ರತವನ್ನು ಗೊತ್ತುಮಾಡಿ ಪ್ರಕಟಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ಐದನೆಯ ವರುಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇವಿುನವರೆಲ್ಲರೂ ಯೆಹೂದದ ಊರುಗಳಿಂದ ಯೆರೂಸಲೇವಿುಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋಯಾಕೀಮನ ಆಳ್ವಿಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಬಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:9
16 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನು ಇದನ್ನು ಕೇಳಿ ಭಯಪಟ್ಟು, ಸರ್ವೇಶ್ವರನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.


ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ - ಎಲ್ಲರೂ ಮನಃಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊಂಡರು.


ಅದು ವರ್ಷದ ಒಂಬತ್ತನೇ ತಿಂಗಳು. ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು. ಅವನ ಮುಂದೆ ಅಗ್ಗಿಷ್ಟಿಕೆ ಉರಿಯುತ್ತಿತ್ತು.


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಕೇಳಿ ಬಂದ ಸರ್ವೇಶ್ವರನ ವಾಣಿ:


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನ, ಇಸ್ರಯೇಲರು ಉಪವಾಸವಾಗಿದ್ದು ಗೋಣೀ ತಟ್ಟನ್ನು ಕಟ್ಟಿಕೊಂಡು, ತಲೆಯ ಮೇಲೆ ಮಣ್ಣುಸುರಿದುಕೊಂಡು, ನೆರೆದುಬಂದರು.


“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವನ್ನು ಸರ್ವದೋಷಪರಿಹಾರ ದಿನವನ್ನಾಗಿ ಆಚರಿಸಬೇಕು. ಅಂದು ದೇವಾರಾಧನೆಗಾಗಿ ಸಭೆಕೂಡಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು.


ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.


ಅಂತೆಯೇ ಅವರು ಅಲ್ಲಿ ಕೂಡಿಬಂದು, ನೀರು ಸೇದಿ ಸರ್ವೇಶ್ವರನ ಮುಂದೆ ಹೊಯ್ದು, ಆ ದಿವಸ ಉಪವಾಸವಿದ್ದು, ದ್ರೋಹಿಗಳಾಗಿದ್ದೇವೆಂದು ಸರ್ವೇಶ್ವರನಿಗೆ ಅರಿಕೆಮಾಡಿದರು. ಸಮುವೇಲನು ಮಿಚ್ಪೆಯಲ್ಲಿ ಇಸ್ರಯೇಲರ ವ್ಯಾಜ್ಯಗಳನ್ನು ತೀರಿಸಿದನು.


ಆದುದರಿಂದ ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಈ ಸುರುಳಿಯಲ್ಲಿ ಬರೆದಿರುವ ಸರ್ವೇಶ್ವರನ ವಾಕ್ಯಗಳನ್ನು, ಉಪವಾಸದಿನದಂದು, ಸರ್ವೇಶ್ವರನ ಆಲಯದೊಳಗೆ ಕೂಡಿರುವ ಜನರಿಗೂ ಆಯಾಯ ಊರುಗಳಿಂದ ಬಂದಿರುವ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ಓದು.


ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು