Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 37:1 - ಕನ್ನಡ ಸತ್ಯವೇದವು C.L. Bible (BSI)

1 ಯೋಷೀಯನ ಮಗ ಚಿದ್ಕೀಯನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು. ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅವನನ್ನು ಜುದೇಯದ ನಾಡಿಗೆ ಅರಸನನ್ನಾಗಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೆಬೂಕದ್ನೆಚ್ಚರನು ಬಾಬಿಲೋನಿನ ರಾಜನಾಗಿದ್ದನು. ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿದ್ಕೀಯನನ್ನು ಯೆಹೂದದ ರಾಜನನ್ನಾಗಿ ನೇಮಿಸಿದ್ದನು. ಚಿದ್ಕೀಯನು ರಾಜನಾದ ಯೋಷೀಯನ ಮಗನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೋಷೀಯನ ಮಗ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಅರಸನನ್ನಾಗಿ ಮಾಡಿದನು. ಅವನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ, ಅರಸನಾಗಿ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 37:1
11 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಮಾತಿದು - “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಕೊನ್ಯನೇ, ನೀನು ನನ್ನ ಬಲಗೈ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆ.


ಬಾಬಿಲೋನಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ‘ಚಿದ್ಕೀಯ’ ಎಂಬ ಹೆಸರಿಟ್ಟನು.


ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಎವೀಲ್ಮೆರೋದಕನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ, ಅಂದರೆ ಜುದೇಯದ ಅರಸ ಯೆಹೋಯಾಕೀಮನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ, ಯೆಹೋಯಾಕೀಮನನ್ನು ಕ್ಷಮಿಸಿ ಸೆರೆಯಿಂದ ಬಿಡುಗಡೆಮಾಡಿದನು.


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗ ಹಾಗೂ ಜುದೇಯದ ಅರಸ ಆದ ಯೆಕೊನ್ಯನನ್ನು, ಜುದೇಯದ ಪ್ರಧಾನಿಗಳನ್ನು, ಶಿಲ್ಪಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದನು. ಇದಾದ ಬಳಿಕ ಸರ್ವೇಶ್ವರ ಸ್ವಾಮಿ ತಮ್ಮ ಆಲಯದ ಮುಂದೆ ಇಟ್ಟಿದ್ದ, ಅಂಜೂರದ ಹಣ್ಣು ತುಂಬಿದ್ದ, ಎರಡು ಬುಟ್ಟಿಗಳನ್ನು ನನಗೆ ಕಾಣುವಂತೆ ಮಾಡಿದರು.


ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?


ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು.


“ಇಸ್ರಯೇಲರ ದೇವರಾದ ಸರ್ವೇಶ್ವರನಾದ ನನ್ನ ನುಡಿ ಇದು: ನೀನು ಜುದೇಯದ ಅರಸ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆಂದು ಹೇಳು - ‘ಸರ್ವೇಶ್ವರನ ಮಾತನ್ನು ಆಲಿಸು: ಇಗೋ, ನಾನು ಈ ನಗರವನ್ನು ಬಾಬಿಲೋನಿನ ಅರಸನ ಕೈವಶಮಾಡುವೆನು. ಅವನು ಇದನ್ನು ಬೆಂಕಿಯಿಂದ ಸುಟ್ಟುಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು